ಸುಭಾಷಿತ :

Saturday, October 19 , 2019 4:33 PM

ದಯವಿಟ್ಟು ‘ಗಣಪತಿಯ ಈ ಭಾಗ ನೋಡಬೇಡಿ’..!


Saturday, September 7th, 2019 12:47 pm

ಸ್ಪೆಷಲ್‌ಡೆಸ್ಕ್: ಗಣಪತಿಯ ಮೂರ್ತಿಯ ಪೂಜೆ ಮಾಡುವ ಮೊದಲು ಸೆಗಣಿಯಿಂದ ಅದನ್ನ ಮಾಡಿ, ಅದರ ಮೇಲೆ ಗರಿಕೆಯನ್ನಿಟ್ಟು ಅದನ್ನು ಪಿಳ್ಳೇರಾಯನೆಂದು ಕರೆದು ಅದಕ್ಕೆ ಪೂಜಿಸಲಾಗುತ್ತದೆ. ಹಾಗೆಯೇ ಪೂಜೆ ಮಾಡುವಾಗ ಮತ್ತು ದೇವಸ್ಥಾನದಲ್ಲಿ ಗಣೇಶನ ಹಿಂಬದಿಯನ್ನು ಮಾತ್ರ ನೋಡಬಾರದು. ಯಾಕೆಂದರೆ ಶಾಸ್ತ್ರಗಳಲ್ಲಿ ಗಣೇಶನ ಹಿಂಭಾಗ ನೋಡುವುದನ್ನು ನಿಷೇಧಿಸಲಾಗಿದೆ. ಅಂದರೆ ಗಣೇಶನನ್ನು ಹಿಂಭಾಗದಿಂದ ದರ್ಶನ ಮಾಡಬಾರದು ಎಂದರ್ಥ.
ಗಣೇಶನ ಶರೀರದ ಪ್ರತಿಯೊಂದು ಅಂಗಾಂಗವೂ ತನ್ನದೇ ಆದ ಮೌಲ್ಯ ಮತ್ತು ವೈಶಿಷ್ಟ್ಯಗಳನ್ನು ಹೊಂದಿದೆ. ಆನೆ ತಲೆಯಲ್ಲಿ ನಂಬಿಕೆ, ಬುದ್ಧಿವಂತಿಕೆ ಮತ್ತು ವಿವೇಚನೆ ಅಡಗಿದೆ. ದಂತ, ಸಾಮರ್ಥ್ಯವನ್ನು ಸೂಚಿಸುತ್ತದೆ. ಕಿವಿ ವಿವೇಕದ ಸಂಕೇತ. ಸೊಂಡಿಲು, ಸತ್ಯ ಮತ್ತು ಮಿಥ್ಯೆಗಳ ನಡುವಣ ವ್ಯತ್ಯಾಸವನ್ನು ಸೂಚಿಸುತ್ತದೆ ಹೀಗೆ ಪ್ರತಿಯೊಂದು ಭಾಗದಲ್ಲಿಯೂ ಜೀವನ ಹಾಗೂ ಬ್ರಹ್ಮಾಂಡದ ಅಂಶಗಳು ಅಡಗಿವೆ. ಆದರೆ ಗಣೇಶನ ಹಿಂಬದಿಯನ್ನು ಮಾತ್ರ ನೋಡಬಾರದು.
ಇದಕ್ಕೆ ಕಾರಣ, ಗಣೇಶನ ಹಿಂಭಾಗದಲ್ಲಿ ದಾರಿದ್ರ್ಯ ನೆಲೆಸಿದೆಯಂತೆ. ಗಣೇಶನ ಹಿಂಭಾಗವನ್ನು ದರ್ಶನ ಮಾಡುವ ವ್ಯಕ್ತಿ ಎಂತಹ ಶ್ರೀಮಂತನಾಗಿರಲಿ ಆತನಿಗೆ ಬಡತನ ಬರಲಿದೆಯಂತೆ. ಹಾಗಾಗಿ ಗಣೇಶನ ಹಿಂಭಾಗವನ್ನು ನೋಡುವಂತಿಲ್ಲ. ಗೊತ್ತಿಲ್ಲದೆ ನೋಡಿದಲ್ಲಿ ಗಣೇಶನಿಗೆ ಕ್ಷಮೆ ಕೋರಿ, ಪ್ರಾರ್ಥನೆ ಮಾಡಿದ್ರೆ ಎಲ್ಲ ಪಾಪಗಳು ಪರಿಹಾರವಾಗಲಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions