ಸುಭಾಷಿತ :

Saturday, October 19 , 2019 4:31 PM

ನಾಳೆಯಿಂದ ಜಮ್ಮು -ಕಾಶ್ಮೀರದಲ್ಲಿ ಕಾರ್ಯಾರಂಭಿಸಲಿವೆ ಎಲ್ಲಾ ಮೊಬೈಲ್ ಸೇವೆಗಳು


Sunday, October 13th, 2019 8:26 am

ಶ್ರೀನಗರ: ಕಳೆದ 69 ದಿನಗಳ ನಂತರ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊಬೈಲ್‌ ಸಂಪರ್ಕವನ್ನು ಮರು ಜಾರಿಗೆ ತರಲು ಸರಕಾರ ಮುಂದಾಗಿದೆ. ಸೋಮವಾರದಿಂದ ಎಲ್ಲಾ ಪೋಸ್ಟ್‌ ಪೇಯ್ಡ್‌ ಮೊಬೈಲ್‌ ಸೇವೆಗಳು ರಾಜ್ಯದಲ್ಲಿ ಕಾರ್ಯಾಚರಣೆ ಆರಂಭಿಸಲಿವೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ದುಗೊಳಿಸಿದ ನಂತರ ಮೊಬೈಲ್ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತಗೊಳಿಸಿತ್ತು..

ಇದೀಗ ಎಲ್ಲಾ ಕಂಪನಿಗಳ ಮೊಬೈಲ್‌ ಸೇವೆಗಳು ಸೋಮವಾರ ಅಂದರೆ ಅಕ್ಟೋಬರ್‌ 14ರ ಬೆಳಿಗ್ಗೆಯಿಂದಲೇ ರಾಜ್ಯದಲ್ಲಿ ಕಾರ್ಯಾಚರಣೆ ಆರಂಭಿಸಲಿವೆ. ರಾಜ್ಯದ ಎಲ್ಲಾ 10 ಜಿಲ್ಲೆಗಳಲ್ಲೂ ಇದು ಕಾರ್ಯರೂಪಕ್ಕೆ ಬರಲಿದೆ ಎಂಬುದಾಗಿ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ರೋಹಿತ್‌ ಕನ್ಸಲ್‌ ಹೇಳಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions