ತುಮಕೂರು: ಹೆಲ್ತ್ ಸಿಸ್ಟಂ ಡೆವಲಪ್ಮೆಂಟ್ ಪ್ರಾಜೆಕ್ಟ್ ಅಧಿಕಾರಿ ನಿವಾಸದ ಮೇಲೆ ಎಸಿಬಿ ​ ದಾಳಿ


Friday, July 13th, 2018 3:34 pm

ತುಮಕೂರು: ಕರ್ನಾಟಕ ಹೆಲ್ತ್ ಸಿಸ್ಟಂ ಡೆವಲಪ್ಮೆಂಟ್ ಪ್ರಾಜೆಕ್ಟ್ ಅಧಿಕಾರಿ ಎಂ.ಸಿ. ಶ್ರೀನಿವಾಸ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್​ ದಾಳಿ ನಡೆಸಿ, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ನಗರದ ಅಶೋಕನಗರ ಬಡಾವಣೆಯ 5ನೇ ಕ್ರಾಸ್​ನಲ್ಲಿರುವ ನಿವಾಸದ ಮೇಲೆ ಎಸಿಬಿ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. 10 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸಿದರು. ಎಸಿಬಿ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

ದಾಳಿ ವೇಳೆ ಮಹತ್ವದ ದಾಖಲೆಗಳನ್ನು ಹಾಗೂ ಚಿನ್ನಾಭರಣಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಶ್ರೀನಿವಾಸ್ ಈ ಹಿಂದೆ ತುಮಕೂರು ಮಹಾನಗರ ಪಾಲಿಕೆಯಲ್ಲಿ ಎಇಇ ಆಗಿ ಕಾರ್ಯನಿರ್ವಹಿಸಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions