ಸುಳ್ಯದಲ್ಲಿ ಭೀಕರ ಕಾರು ಅಪಘಾತ : ಚನ್ನಪಟ್ಟಣದ ಮೂವರ ದುರ್ಮರಣ


Sunday, July 14th, 2019 6:27 pm

ಮಂಗಳೂರು :  ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂಬೂರಿನಲ್ಲಿ ನಡೆದಿದೆ.

ಮೃತರನ್ನು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಮಂಜುಳಾ, ಸೋಮಣ್ಣ ಮತ್ತು ನಾಗೇಂದ್ರ ಎಂದು ಗುರುತಿಸಲಾಗಿದೆ.

ಮಂಜುಳಾ ಅವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗ ಗಾಯಗೊಂಡಿದ್ದ ಸೋಮಣ್ಣ ಹಾಗೂ ನಾಗೇಂದ್ರ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ.  ಮೃತ ನಾಗೇಂದ್ರ ಅವರ ಮಗ ಪೂರ್ವಿಕ್ ಸುಳ್ಯದ ಶಾಲೆಯೊಂದರಲ್ಲಿ ಓದುತ್ತಿದ್ದು, ಮಗನನ್ನು ನೋಡಲೆಂದು ಭಾನುವಾರ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions