ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು


Friday, July 6th, 2018 10:36 am

ತುಮಕೂರು: ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಹಿಂಡಸ್ಕೆರೆ ಬಳಿ  ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಚಿತ್ರದುರ್ಗ ಮೂಲದ ವಿನಯ್(22), ಶಿರಾದ ಬರಗೂರು ಮೂಲದ ತಿಪ್ಪೇಸ್ವಾಮಿ(40),ಬೆಂಗಳೂರು ಮೂಲದ ಅರವಿಂದ್(32) ಅಂತ ತಿಳಿದು ಬಂದಿದ್ದು, ಮೃತರು ಶಿವಮೊಗ್ಗದಲ್ಲಿ ಸ್ನೇಹಿತನ ವಿವಾಹ ಮುಗಿಸಿ ಹಿಂತಿರುಗುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಇನ್ನು ಘಟನ ಸ್ಥಳಕ್ಕೆ ಕೆ.ಬಿ.ಕ್ರಾಸ್ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions