ಸುಭಾಷಿತ :

Thursday, January 23 , 2020 5:57 PM

ಅಸ್ಸಾಂ ಭೀಕರ ಪ್ರವಾಹ : 2 ಕೋಟಿ ನೆರವು ಘೋಷಿಸಿದ ನಟ ಅಕ್ಷಯ್ ಕುಮಾರ್


Thursday, July 18th, 2019 9:12 am

ನವದೆಹಲಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಪ್ರವಾಹ ಪೀಡಿತ ಅಸ್ಸಾಂನ ಜನರಿಗೆ ಮತ್ತು ಕಾಜಿರಂಗ ಉದ್ಯಾನಕ್ಕೆ ತಲಾ 1 ಕೋಟಿ ರೂಪಾಯಿಯಂತೆ ಒಟ್ಟು ಎರಡು ಕೋಟಿ ರೂ ಸಹಾಯ ದನವನ್ನು ನೀಡುವುದಾಗಿ ತಮ್ಮ ಟ್ವಿಟ್ಟರ್ ನಲ್ಲಿ ಘೋಷಿಸಿದ್ದಾರೆ.

ಈಗ ತಮ್ಮ ಟ್ವಿಟ್ಟರ್ ನಲ್ಲಿ ಅಕ್ಷಯ್ ಕುಮಾರ್ ‘ಅಸ್ಸಾಂನಲ್ಲಿನ ಪ್ರವಾಹದಿಂದ ಉಂಟಾದ ನಾಶ ನಿಜಕ್ಕೂ ನೋವು ತಂದಿದೆ. ಈ ಸಂದರ್ಭದಲ್ಲಿ ಎಲ್ಲಾ ಪೀಡಿತ, ಮಾನವರು ಅಥವಾ ಪ್ರಾಣಿಗಳು, ಈ ಸಂಕಷ್ಟದ ಸಮಯದಲ್ಲಿ ಬೆಂಬಲಕ್ಕೆ ಅರ್ಹ. ಆದ್ದರಿಂದ ನಾನು ಮುಖ್ಯಮಂತ್ರಿ ಪರಿಹಾರ ನಿಧಿ ಹಾಗೂ ಕಾಜಿರಂಗ ಪಾರ್ಕ್ ಪಾರುಗಾಣಿಕಾಕ್ಕೆ ತಲಾ ಒಂದು ಕೋಟಿ ದಾನ ಮಾಡಲು ಬಯಸುತ್ತೇನೆ’ ಎಂದು ಹೇಳಿದ್ದಾರೆ. ಅಲ್ಲದೆ ಪ್ರತಿಯೊಬ್ಬರೂ ನೆರವಿನ ಸಹಾಯ ಹಸ್ತಚಾಚಲು ಅವರು ಮನವಿ ಮಾಡಿಕೊಂಡಿದ್ದಾರೆ.

ಬ್ರಹ್ಮಪುತ್ರಾ ನದಿ ಪ್ರವಾಹದಿಂದಾಗಿ ಅಸ್ಸಾಂನಲ್ಲಿ ಭೂಕುಸಿತದಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಮತ್ತು 46 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟದಲ್ಲಿದ್ದಾರೆ. ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದ ಸುಮಾರು ಶೇ 90ರಷ್ಟು ಭಾಗವು ಈಗ ನೀರಿನಲ್ಲಿ ಮುಳುಗಿದೆ ಎನ್ನಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions