`ರಾಜಕೀಯ ಎಂಟ್ರಿ’ ಬಗ್ಗೆ ಬಾಲಿವುಡ್ ನಟ `ಅಕ್ಷಯ್ ಕುಮಾರ್’ ಹೇಳಿದ್ದೇನು?


Tuesday, March 19th, 2019 12:11 pm

ನವದೆಹಲಿ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ನಡೆಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಅಕ್ಷಯ್ ಕುಮಾರ್ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅಕ್ಷಯ್ ಕುಮಾರ್, ರಾಜಕೀಯ ಪ್ರವೇಶದ ಕುರಿತ ಸುದ್ದಿಯನ್ನು ತಳ್ಳಿಹಾಕಿದ್ದು, ನಾನು ಯಾವುದೇ ರೀತಿಯ ಚುನಾವಣೆ ಸ್ಪರ್ಧೆ ನಡೆಸುವುದಿಲ್ಲ. ರಾಜಕೀಯ ನನ್ನ ಅಜೆಂಡಾ ಅಲ್ಲ. ಸದ್ಯ ನಾನು ಸಿನಿಮಾದ ಮೂಲಕ ಮಾಡುತ್ತಿರುವ ಕಾರ್ಯವನ್ನು ರಾಜಕೀಯದಲ್ಲಿ ಮಾಡಲು ಅಸಾಧ್ಯ ಎಂದುಕೊಂಡಿದ್ದೇನೆ ಎಂದು ಉತ್ತರಿಸಿದ್ದಾರೆ.

ಅಕ್ಷಯ್ ಕುಮಾರ್ ಲೋಕಸಭೆ ಚುನಾವಣೆಗೆ ಅಮೃತ್ ಸರ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions