ಸುಭಾಷಿತ :

Tuesday, September 17 , 2019 6:59 AM

-->

ಮೋದಿ ಜನ್ಮದಿನ : ಬಿಜೆಪಿಯಿಂದ `ಸೇವಾ ಸಪ್ತಾಹ’ ಅಭಿಯಾನಕ್ಕೆ ಅಮಿತ್ ಶಾ ಚಾಲನೆ


Saturday, September 14th, 2019 10:09 am

ನವದೆಹಲಿ : ಸೆ. 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ಸೆ. 14 ರಿಂದ 17 ರವರೆಗೆ ಸೇವಾ ಸಪ್ತಾಹ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಸೇರಿ ಹಲವು ಮುಖಂಡರು ಆಸ್ಪತ್ರೆಯ ನೆಲವನ್ನು ಒರೆಸಿ ಸ್ವಚ್ಛಗೊಳಿಸುವ ಮೂಲಕ ಸೇವಾ ಸಪ್ತಾಯಕ್ಕೆ ಚಾಲನೆ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ, ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು, ಮುಖಂಡರು ಇಂದಿನಿಂದ ಸೇವಾ ಸಪ್ತಾಯ ಆಚರಿಸಲು ಪ್ರಾರಂಭಿಸಿದ್ದಾರೆ. ನಮ್ಮ ಪ್ರಧಾನಿ ದೇಶಸೇವೆಗಾಗಿ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ.ಬಡ ಜನರ ಕಲ್ಯಾಣಕ್ಕಾಗಿ ದುಡಿಯುತ್ತಿದ್ದಾರೆ ಹಾಗಾಗಿ ಅವರ ಜನ್ಮದಿನದ ನಿಮಿತ್ತ ಸೇವಾ ಸಪ್ತಾಹ ಆಚರಿಸಲಾಗುವುದು ಎಂದು ಹೇಳಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions