ಮತ್ತೊಮ್ಮೆ ಮಾನವೀಯತೆ ಮೆರೆದ ಬಿಗ್ ಬಿ : 2,100 ಬಡ ರೈತರ ಸಾಲ ತೀರಿಸಿದ ಅಮಿತಾಬ್ ಬಚ್ಚನ್


Thursday, June 13th, 2019 10:44 am

ಮುಂಬೈ : ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ಮತ್ತೊಮ್ಮೆ ಸುಮಾರು 2,100 ಬಡ ರೈತರ ಸಾಲ ತೀರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹೌದು, ಅಮಿತಾಬ್ ಬಚ್ಚನ್ ಅವರು ಬಿಹಾರ ರಾಜ್ಯದ 2,100 ಬಡ ರೈತರ ಸಾಲ ತೀರಿಸಿದ್ದಾರೆ. ಈ ಬಗ್ಗೆ ಅಮಿತಾಬ್ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದು, ಮಾತು ನೀಡಿದ್ದನ್ನು ಪೂರ್ಣಗೊಳಿಸಿದ್ದೇನೆ. ಸಾಲ ಹೊಂದಿದ 2.100 ರೈತರ ಸಾಲಮನ್ನ ಮರು ಪಾವತಿಸಲಾಗಿದೆ. ಇನ್ನು ಕೆಲವರಿಗೆ ವೈಯಕ್ತಿಕವಾಗಿ ಕರೆದು ಶ್ವೇತಾ ಹಾಗೂ ಅಭಿಷೇಕ್ ಮೂಲಕ ನೀಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಕಳೆದ ವರ್ಷದ ನವೆಂಬರ್ ನಲ್ಲಿ ಅಮಿತಾಬ್ ಬಚ್ಚನ್ ಅವರು ಉತ್ತರ ಪ್ರದೇಶದ 1,398 ರೈತರ 3.99 ಕೋಟಿ ರೂ. ಸಾಲವನ್ನು ಮರುಪಾವತಿ ಮಾಡಿದ್ದರು. ಅದಕ್ಕೂ ಮೊದಲು 350 ರೈತರ ಸಾಲವನ್ನು ಪಾವತಿಸಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions