ಸುಭಾಷಿತ :

Sunday, January 26 , 2020 6:42 PM

ಬ್ರೇಕಿಂಗ್ : ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಮತ್ತಷ್ಟು ಕ್ಷೀಣ


Saturday, August 24th, 2019 9:49 am

ನವದೆಹಲಿ : ಕೇಂದ್ರದ ಮಾಜಿ ಹಣಕಾಸು ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಉಸಿರಾಟ ಹಾಗೂ ಹೃದಯ ಸಂಬಂಧಿ ಸಮಸ್ಯೆಯಿಂದ ಅರುಣ್ ಜೇಟ್ಲಿ ಅವರನ್ನು ಆಗಸ್ಟ್ 9 ರ ಬೆಳಗ್ಗೆ 11 ಗಂಟೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅರುಣ್ ಜೇಟ್ಲಿ ಅನಾರೋಗ್ಯದ  ಕುರಿತು ಮಾಹಿತಿ ಸಿಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಗೃಹ ಸಚಿವ ಅಮಿತ್ ಶಾ ಅವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

ಅನಾರೋಗ್ಯದ ಕಾರಣ 2019 ರ ಲೋಕಸಭಾ ಚುನಾವಣೆಯಿಂದ ಜೇಟ್ಲಿ ಅವರು ಹೊರಗುಳದಿದ್ದರು. ಪ್ರಧಾನಿ ಮೋದಿ ನೇತೃತ್ವದ ಅಧಿಕಾರಕ್ಕೆ ಬಂದ ಬಳಿಕ ಮೋದಿಗೆ ಪತ್ರ ಬರೆದಿದ್ದ ಜೇಟ್ಲಿ ನನ್ನನ್ನು ಎಲ್ಲ ಜವಾಬ್ದಾರಿಗಳಿಂದಲೂ ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions