ಸುಭಾಷಿತ :

Sunday, January 26 , 2020 4:17 AM

ಬ್ರೇಕಿಂಗ್ : ದೋಸ್ತಿ ಮನವೊಲಿಕೆಗೆ ಕೊನೆಗೂ ಮಣಿದ ರಾಮಲಿಂಗಾ ರೆಡ್ಡಿ, ರಾಜೀನಾಮೆ ವಾಪಾಸ್


Wednesday, July 17th, 2019 9:16 pm

ಬೆಂಗಳೂರು : ದೋಸ್ತಿ ಸರ್ಕಾರಕ್ಕೆ ಶಾಸಕರ ರಾಜೀನಾಮೆ ಪ್ರಕರಣ ಅಲ್ಪ ಮತಕ್ಕೆ ಕುಸಿಯುವಂತೆ ಮಾಡಿತ್ತು. ಇದೀಗ ಇಂತಹ ಬೆಳವಣಿಗೆಯಿಂದ ಕಾಂಗ್ರೆಸ್ ಅತೃಪ್ತ ರಾಜೀನಾಮೆ ನೀಡಿರುವ ಶಾಸಕರನ್ನು ಮನವೊಲಿಕೆ ಕಸರತ್ತು ನಡೆಸಿತ್ತು. ಇಂತಹ ಕಸರತ್ತಿನಲ್ಲಿ ಯಶಸ್ವಿಯಾಗಿರುವ ದೋಸ್ತಿಗಳು ಶಾಸಕ ರಾಮಲಿಂಗಾರೆಡ್ಡಿಯವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ರಾಮಲಿಂಗಾರೆಡ್ಡಿ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು ವಾಪಾಸ್ ಪಡೆಯುತ್ತಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ, ತಾವು ಕಾಂಗ್ರೆಸ್ ಹೈ ಕಮಾಂಡ್ ಹಾಗೂ ಕಾರ್ಯಕರ್ತರ ಒತ್ತಾಯದ ಮೇರೆಗೆ ರಾಜೀನಾಮೆ ವಾಪಾಸ್ ಪಡೆಯುತ್ತಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ ರಾಮಲಿಂಗಾರೆಡ್ಡಿ ತಿಳಿಸಿರುವ ಪ್ರಕಟಣೆ ಹೀಗಿದೆ..

ರಾಮಲಿಂಗ ರೆಡ್ಡಿ ಶಾಸಕರು ಬಿಟಿಎಂ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್ ಹೈ ಕಮಾಂಡ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮಾಡುವ ವಿಜ್ಞಾಪನೆಗಳು. ಕರ್ನಾಟಕದಲ್ಲಿ ನಡೆಯುತ್ತಿರುವ ಬಹುತೇಕ ರಾಜಕೀಯ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಹೈ ಕಮಾಂಡ್ ಹಾಗೂ ಕಾರ್ಯಕರ್ತರಿಗೆ ಬಹುತೇಕ ಅರಿವಿದೆ

ಕಾಂಗ್ರೆಸ್ ಪಕ್ಷದಲ್ಲಿನ ಕೆಲವು ವಿದ್ಯಾಮಾನಗಳಿಂದ ಬೇಸರವಾಗಿ (ಕಾರಣಗಳನ್ನು ಅನೇಕ ಬಾರಿ ಮಾಧ್ಯಮ ಮುಖಾಂತರ ತಿಳಿಸಿದ್ದೇನೆ) ದಿನಾಂಕ 06-07-2019 ರಂದು ನಾನು ಆಯ್ಕೆಯಾಗಿರುವ ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುತ್ತೇನೆ. ನಾನೆಂದು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟವನಲ್ಲ ಸ್ಥಾನಮಾನ ಪಡೆಯಲು ನಾನು ಎಂದೂ ಆಸೆಪಟ್ಟವನಲ್ಲ,

ಕಳೆದ 45 ವರ್ಷದ ಸುಧೀರ್ಘ ರಾಜಕೀಯ ಜೀವನದಲ್ಲಿ ನಿಷ್ಟಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿ,
7 ಬಾರಿ ಶಾಸಕನಾಗಿ ಪಕ್ಷದ ಶ್ರೇಯೋಭಿವೃದ್ದಿಗಾಗಿ ಹಾಗೂ ನನ್ನ ಮತಕ್ಷೇತ್ರದ ಅಭಿವೃದ್ಧಿಗಾಗಿ ಮತ್ತು ಸಚಿವನಾಗಿದ್ದಂತಹ ಸಂದರ್ಭದಲ್ಲಿ ರಾಜ್ಯಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ. ಕಾಂಗ್ರೆಸ್‍ನ ಹಲವಾರು ವಿದ್ಯಾಮಾನಗಳಿಂದ ಶಾಸಕ ಸ್ಥಾನಕ್ಕೆ ಮಾತ್ರ ನನ್ನ ರಾಜೀನಾಮೆ ಹೊರತು ಪಕ್ಷಕ್ಕಲ್ಲ ಎಂದು ಹಿಂದೆಯೂ ಸ್ಪಷ್ಟಪಡಿಸಿದ್ದೇನೆ,

ಕಾಂಗ್ರೆಸ್ ನ ಹಿರಿಯನಾಯಕರು ರಾಜೀನಾಮೆ ವಾಪಾಸ್ ಪಡೆದು ಪಕ್ಷದಲ್ಲಿರುವಂತೆ ಕೋರಿರುತ್ತಾರೆ,
ರಾಜ್ಯದ ಉದ್ದಗಲಕ್ಕೂ ಕಾಂಗ್ರೆಸ್ ಕಾರ್ಯಕರ್ತರು ರಾಜೀನಾಮೆ ವಾಪಾಸ್ ಪಡೆಯಲು ಮನವಿ ಮಾಡಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯಲು ತೀರ್ಮಾನಿಸಿದ್ದು ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತಿದ್ದೇನೆ.

ತಮ್ಮ ವಿಶ್ವಾಸಿ
ರಾಮಲಿಂಗಾ ರೆಡ್ಡಿ

ಹೀಗೆ ದೋಸ್ತಿ ಸರ್ಕಾರದ ಮನವೊಲಿಕೆಗೆ ಮಣಿದಿರುವ ಶಾಸಕ ರಾಮಲಿಂಗಾ ರೆಡ್ಡಿ ಇದೀಗ ರಾಜೀನಾಮೆ ಸದ್ಯದಲ್ಲಿಯೇ ವಾಪಾಸ್ ಪಡೆಯಲಿದ್ದಾರೆ. ಈ ಮೂಲಕ ದೋಸ್ತಿಗೆ ಕೊಂಚ ಖುಷಿಯನ್ನು ನೀಡಿದ್ದಾರೆ. ಇವರೊಟ್ಟಿಗೆ ನಾಳೆ ನಡೆಯುವ ಬಹುಮತ ಸಾಭೀತು ಪ್ರಕ್ರಿಯೆಯಲ್ಲಿ ಬೆಂಗಳೂರಿನ ಇತರೆ ಶಾಸಕರು ಕೂಡ ಹಾಜರಾಗುವ ಸಾಧ್ಯತೆ ಇದೆ. ಹೀಗಾಗಿ ದೋಸ್ತಿ ಸೇಫ್ ಆಗಿ, ಬಹುಮತ ಸಾಭೀತು ಪಡಿಸುವಲ್ಲಿ ಸಫಲವಾಗಲಿದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions