ಸುಭಾಷಿತ :

Monday, September 23 , 2019 3:53 PM

ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್ ಬಂಧನಕ್ಕೆ ಸುಪ್ರೀಂಕೋರ್ಟ್ ತಡೆ!


Wednesday, May 22nd, 2019 4:43 pm

ಕೋಲ್ಕತ್ತಾ : ಲೋಕಸಭೆ ಚುನಾವಣೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಬರಕ್ ಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಅವರ ಬಂಧನಕ್ಕೆ ಐದು ದಿನಗಳ ತಡೆಯಾಜ್ಞೆ ನೀಡಿದೆ.

ಪಶ್ಚಿಮ ಬಂಗಾಳದಲ್ಲಿ ಪೊಲೀಸರು ನನ್ನನ್ನು ಬಂಧಿಸುವುದಾಗಿ ಹೇಳಿದ್ದಾರೆ. ಗುರುವಾರ ನಡೆಯಲಿರುವ ಮತ ಎಣಿಕೆ ವೇಳೆ ಉಪಸ್ಥಿತರಿರುವುದನ್ನು ತಡೆಯುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್ ಗೆ ವಕೀಲ ರಂಜಿತ್ ಮಿಶ್ರಾ ಮೂಲಕ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿಗಳಾದ ಅರುಣ್ ಮಿಶ್ರಾ ಹಾಗೂ ಎಂ.ಆರ್. ಶಾಹ್ ಅವರನ್ನೊಳಗೊಂಡ ಪೀಠ, ಅರ್ಜುನ್ ಸಿಂಗ್ ಬಂದನಕ್ಕೆ ಐದು ದಿನಗಳ ತಡೆಯಾಜ್ಞೆ ನೀಡಿದೆ. ಕೊನೆಯ ಹಂತದ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ಸಿಂಗ್ ಕಡೆಯ ಗೂಂಡಾಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆಂದು ತೃಣಮೂಲ ಕಾಂಗ್ರೆಸ್ ಮುಖಂಡರೊಬ್ಬರು ಪೊಲೀಸರಿಗೆ ದೂರು ನೀಡಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions