ಸುಭಾಷಿತ :

Monday, September 23 , 2019 3:57 PM

ಐಎಂಎ ವಂಚನೆ ಪ್ರಕರಣ : ಸಿಬಿಐ ತನಿಖೆಗೆ ವಹಿಸುವಂತೆ ರಾಜ್ಯ ಬಿಜೆಪಿ ಸಂಸದರಿಂದ ಕೇಂದ್ರ ಹಣಕಾಸು ಸಚಿವರಿಗೆ ಮನವಿ


Thursday, June 20th, 2019 5:38 pm

ನವದೆಹಲಿ : ರಾಜ್ಯದಲ್ಲಿನ ಐಎಂಎ ಬಹುಕೋಟಿ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ರಾಜ್ಯ ಬಿಜೆಪಿ ಸಂಸದರ ನಿಯೋಗ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ನವದೆಹಲಿಗೆ ತೆರಳಿರುವ ರಾಜ್ಯ ಬಿಜೆಪಿ ಸಂಸದರ ನಿಯೋಗ IMA ಜ್ಯೂವೆಲರಿ ಹಗರಣದಿಂದಾಗಿ ಸಾಮಾನ್ಯ ಜನರಿಗೆ ಆಗಿರುವ ಅನ್ಯಾಯವಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು.  ಕೇಂದ್ರ ಹಣಕಾಸು ಸಚಿವಾಲಯದ ನೇತೃತ್ವದಲ್ಲಿ ತನಿಖೆ ನಡೆಸಿ ಈ ಅವ್ಯವಹಾರವನ್ನು ಬಯಲಿಗೆಳೆಯಬೇಕು. ಈ ಪ್ರಕರಣದಲ್ಲಿ ಶಾಮೀಲಾಗಿರುವ ಎಲ್ಲರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮ್ ಅವರನ್ನು ಕರ್ನಾಟಕದ ಸಂಸದರ ನಿಯೋಗವು ಭೇಟಿ ಮಾಡಿ ಮನವಿ ಮಾಡಿದೆ.

ನವದೆಹಲಿಯ ಸಂಸತ್ ಭವನದ ಹಣಕಾಸು ಇಲಾಖೆಯ ಕಚೇರಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಸಂಸದರಾದ ಕುಮಾರಿ ಶೋಭಾ ಕರಂದ್ಲಾಜೆ, ಬಿವೈ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಇತರರು, ರಾಜ್ಯ ಸರ್ಕಾರ ಪ್ರಕರಣವನ್ನು ಎಸ್ಐಟಿಗೆ ವಹಿಸಿದೆ. ಇದನ್ನು ಬದಲಿಸಿ ಸಿಬಿಐ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions