ಸುಭಾಷಿತ :

Saturday, October 19 , 2019 4:29 PM

ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಬಿ.ಎಲ್ ಸಂತೋಷ್ ನೇಮಕ


Sunday, July 14th, 2019 7:04 pm

ನವದೆಹಲಿ : ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಮಲಾಲ್ರಾಜೀನಾಮೆ ನೀಡಿದ ಹಿನ್ನೆಲೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿ.ಎಲ್.ಸಂತೋಷ್ ಅವರನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ನೇಮಕವು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾಧ್ಯಮ ಹೇಳಿಕೆಯ ಮೂಲಕ ತಿಳಿಸಿದ್ದಾರೆ.

ಬಿಜೆಪಿ ಮತ್ತು ಆರೆಸ್ಸೆಸ್ಮಧ್ಯೆ ಪ್ರಮುಖ ಸಂವಹನ ಕೊಂಡಿಯಾಗಿ ರಾಮಲಾಲ್ಕಾರ್ಯನಿರ್ವಹಿಸುತ್ತಿದ್ದರು. ಸಂಘಟನೆಯಲ್ಲಿ ಹಲವು ವರ್ಷ ದುಡಿದವರನ್ನು ಹುದ್ದೆಗೆ ಸಾಮಾನ್ಯವಾಗಿ ನೇಮಿಸಲಾಗುತ್ತದೆ. ಹಿಂದೆ ಪ್ರಧಾನಿ ಮೋದಿ ಕೂಡ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದರು. ರಾಮಲಾಲ್ಅಡಿಯಲ್ಲಿ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಿ.ಎಲ್ ಸಂತೋಷ್ ಈಗ ಅವರ ಸ್ಥಾನ ತುಂಬಲಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions