ಬೈಕ್​ ಅಪಘಾತದಲ್ಲಿ ಗಾಯಗೊಂಡಿದ್ದ ಅಣ್ಣ-ತಂಗಿಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಜನತೆ


Thursday, July 12th, 2018 12:50 pm

ಮೈಸೂರು: ರಸ್ತೆ ಅಪಘಾತದಲ್ಲಿ ಅಣ್ಣ- ತಂಗಿ ದಾರುಣಾವಾಗಿ ಸಾವನ್ನಪ್ಪಿರುವಂತಹ ದುರ್ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿ ನಡೆದಿದೆ.

ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಬಳಿ ನಿನ್ನೆ ರಾತ್ರಿ ಅಮೋಘ ವರ್ಷ(18), ಅಮೃತ ವರ್ಷಿಣಿ(14) ಎಂಬುವರು ಬೈಕ್ ನಲ್ಲಿ ಗೊರಳ್ಳಿಗೆ ಹೊರಟಿದ್ದರು. ಈ ವೇಳೆ ಬೆಟ್ಟಪುರದ ಬಳಿ ವೇವ್ ಬ್ರಿಡ್ಜ್​ನಿಂದ ಲಾರಿಯೊಂದು ಏಕಾಏಕಿ ರಸ್ತೆಗೆ ತಿರುಗಿದಾಗ ವೇಗದಲ್ಲಿ ಬರುತ್ತಿದ್ದ ಬೈಕ್​ಗೆ ಲಾರಿ ಡಿಕ್ಕಿ ಹೊಡೆದು ಪರಿಣಾಮ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಇದೇ ವೇಳೆ ಸ್ಥಳದಲ್ಲಿದವರು ಗಾಯಗೊಂಡರವರ ನೆರವಿಗೆ ಬಾರದೇ ಬ್ಬರನ್ನು ಜನರು ರಕ್ಷಣೆ ಮಾಡದೆ ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ನಂತರ ಈ ಇಬ್ಬರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ಎನ್ನಲಾಗಿದೆ

ಈ ಸಂಬಂಧ ಬೆಟ್ಟದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions