ನಕ್ಸಲರ ಗುಂಡಿನ ದಾಳಿಗೆ ಬೆಳಗಾವಿ ಮೂಲದ ಯೋಧ ಹುತಾತ್ಮ


Sunday, March 17th, 2019 7:56 pm

ಬೆಳಗಾವಿ : ನಕ್ಸಲರು ನಡೆಸಿದ ಗುಂಡಿನ ದಾಳಿಗೆ ಬೆಳಗಾವಿ ಮೂಲದ ಯೋಧ ಹುತಾತ್ಮರಾಗಿದ್ದಾರೆ.

ಖಾನಾಪುರ ತಾಲೂಕಿನ ನಾವಗಾ ಗ್ರಾಮದ ರಾಹುಲ್ ವಸಂತ ಶಿಂಧೆ (26) ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪಶ್ಚಿಮ ಬಂಗಾಳದ ಬಿಎಸ್ ಎಫ್  ವಿಭಾಗದ;ಲ್ಲಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಕ್ವಾರ್ಟರ್ಸ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬಿಎಸ್ ಎಫ್ ಯೋಧನ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಸೋಮವಾರ ಸಂಜೆ ಗೋವಾ ಮಾರ್ಗವಾಗಿ ಹುತಾತ್ಮ ಯೋಧನ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಬರಲಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions