ಬಿಗ್ ನ್ಯೂಸ್ : `ಮಹಾಘಟಬಂಧನ್’ ರಚನೆಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಬಿಗ್ ಪ್ಲಾನ್!


Saturday, May 18th, 2019 11:10 am

 

ನವದೆಹಲಿ : ಲೋಕಸಭೆ ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ರಾಷ್ಟ್ರರಾಜಕಾರಣದಲ್ಲಿ ಭಾರೀ ಕುತೂಹಲ ಮೂಡುತ್ತಿದ್ದು, ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸಿ ಕೇಂದ್ರದಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಇಂದು ಮಹತ್ವದ ಸಭೆ ನಡೆಸಲಿದ್ದಾರೆ.

ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಮತ್ತು ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಚಂದ್ರಬಾಬು ನಾಯ್ಡು ಭೇಟಿಯಾಗಿ ಮಹತ್ವದ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಬಿಜೆಪಿ ವಿರುದ್ಧದ ಎಲ್ಲಾ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದೇವೆ. ಸಿಎಂ ಕೆಸಿಆರ್ ನೇತೃತ್ವದ ಟಿಆರ್ ಎಸ್ ಮಹಾಘಟಬಂಧನ್ ಸೇರಲು ಮುಂದಾಗಿದೆ. ಹೀಗೆ ಕೇಸರಿ ಪಕ್ಷವನ್ನು ವಿರೋಧಿಸುವ ಯಾವುದೇ ಪಕ್ಷವಾಗಲಿ ನಮ್ಮ ಜೊತೆ ಕೈ ಜೋಡಿಸಬಹುದು ಎಂದು ಸಿಎಂ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.

ಇನ್ನು ತೆಲುಗು ದೇಶಂ ಪಕ್ಷದ ನಾಯ್ಡು ಅವರು, ಎನ್ ಸಿಪಿ ಮುಖಂಡ ಶರದ್ ಪವಾರ್, ಸಿಪಿಐ ಮುಖಂಡ ಸುರವರಂ ಸುಧಾಕರ್ ರೆಡ್ಡಿ, ಎಲ್ ಜೆಡಿ ನಾಯಕ್ ಶರದ್ ಯಾದವ್ ಅವರ ಜೊತೆಗೆ ಮಾತುಕತೆಗೆ ನಾಯ್ಡು ಮುಂದಾಗಿದ್ದಾರೆ ಎನ್ನಲಾಗಿದೆ. ಒಟ್ಟಾರೆಯಾಗಿ ಲೋಕಸಭೆ ಚುನಾವಣೆಯ ಫಲಿತಾಂಶಕ್ಕೂ ಮುನ್ನ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳು ತೀವ್ರ ಕುತೂಹಲಕ್ಕೆ ಕಾರಣವಾಗಿವೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions