-->

ಡಿವೈಡರ್ ಗೆ ಡಿಕ್ಕಿ ಹೊಡೆದು ಸೇತುವೆ ಮೇಲಿಂದ ಬಿದ್ದ ಕಾರು : ಚಾಲಕ ಸಾವು, ಮೂವರ ಸ್ಥಿತಿ ಗಂಭೀರ


Friday, June 14th, 2019 9:33 pm

ಚಿಕ್ಕಬಳ್ಳಾಪುರ :   ಕಾರೊಂದು ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಸೇತುವೆ ಮೇಲೆ ತಡೆಗೋಡೆಗೆ ಡಿಕ್ಕಿ ಹೊಡೆದು ಕೆಳಗೆ ಉರುಳಿಬಿದ್ದಿದ್ದು, ಚಾಲಕ ಮೃತಪಟ್ಟು, ಮೂವರ ಸ್ಥಿತಿ ಗಂಭೀರವಾಗಿದೆ.

ಮೃತಪಟ್ಟ ಕಾರಿನ ಚಾಲಕನನ್ನು ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ನಿವಾಸಿ ರಘು (25) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಸ್ಥಿತಿ ಕೂಡ ಗಂಭೀರವಾಗಿದೆ.

ಕಾರು ಸಿನಿಮೀಯ ರೀತಿಯಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದು ಕೆಳಗೆ ಉರುಳಿಬಿದ್ದಿದ್ದು, ಸ್ಥಳದಲ್ಲಿ ಜನಜಂಗುಳಿಯೇ ಹರಿದಿತ್ತು.  ಘಟನೆ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ಕ್ರೇನ್ ನೀಡಿ ಕಾರು ತೆರವುಗೊಳಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions