ಸುಭಾಷಿತ :

Saturday, October 19 , 2019 4:32 PM

‘ರೈಲು’ ಏರಿ ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಹೆಚ್ಡಿಕೆ


Thursday, June 20th, 2019 9:12 pm

ಬೆಂಗಳೂರು : ನಾಳೆ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯ ಯಾದಗಿರಿ ಜಿಲ್ಲೆಯ ಗುರುಮಿಠ್ಕಲ್ ತಾಲ್ಲೂಕಿನ ಚಂಡರಕಿ ಗ್ರಾಮದಿಂದ ವಿನೂತನ ರೀತಿಯಲ್ಲಿ ಆರಂಭವಾಗಲಿದೆ.

ಈ ಹಿನ್ನೆಲೆ ಯಾದಗಿರಿ ಜಿಲ್ಲೆಯ ಗುರುಮಿಠ್ಕಲ್ ಗೆ ತೆರಳಲು ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಸಂಜೆ ರೈಲು ಏರಿದರು.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಾತ್ರಿ 7:30 ಕ್ಕೆ ಕರ್ನಾಟಕ ಎಕ್ಸ್ ಪ್ರೆಸ್ ರೈಲು ಹತ್ತಿದ ಸಿಎಂ ಹೆಚ್ಡಿಕೆ ಅವರು ಶುಕ್ರವಾರ 3:48 ನಸುಕಿನಲ್ಲಿ ಯಾದಗಿರಿ ರೈಲು ನಿಲ್ದಾಣ ತಲುಪಲಿದ್ದಾರೆ. ನಂತರ ರಸ್ತೆ ಮೂಲಕ ಗ್ರಾಮ ವಾಸ್ತವ್ಯ ನಿಗದಿಯಾಗಿರುವ ಚಂಡರಕಿ ಕಡೆಗೆ ಅವರು ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions