ಪರಿಷತ್ ಚುನಾವಣೆಯಲ್ಲಿ ಸೋಲು : ಗೋಳೋ ಅಂತಾ ಕಣ್ಣೀರಿಟ್ಟ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್


Thursday, June 14th, 2018 2:09 pm

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರು ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಗೋಳೋ ಅಂತಾ ಕಣ್ಣೀರಿಟ್ಟಿರುವ ಘಟನೆ ನಡೆದಿದೆ

ಅವರು ಇಂದು ನಗರದಲ್ಲಿ ನಡೆದ ಮಾಧ್ಯಮಗೀಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಇದೇ ವೇಳೆ ಅವರು ಮಾತನಾಡಿ  ನನಗೆ ಈಗ ರಾಜಕೀಯಕ್ಕೆ ಬಂದು ತಪ್ಪು ಮಾಡಿದೆ ಅಂತ ಅನ್ನಿಸುತ್ತಿದೆ. ನಾನು ಮೂರನೇ ಬಾರಿಗೆ ಈ ಚುನಾವಣೆಯಲ್ಲಿ ಸೋತಿದ್ದೇನೆ. ಕಳೆದ 10 ವರ್ಷಗಳಿಂದ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿದ್ದಕ್ಕೆ ಇದು ನೀವು ಕೊಟ್ಟ ಬಹುಮಾನವಾ ಎಂದು ಪ್ರಶ್ನಿಸಿ ಕಣ್ಣೀರಿಟ್ಟಿದ್ದಾರೆ.

ಇದೇ ವೇಳೆ ಅವರು ಮಾತನಾಡಿ ನನ್ನ ಕುಟುಂಬ ಹೇಗೆ ನಿರ್ವಹಣೆ ಮಾಡಬೇಕು ಎಂಬ ಚಿಂತೆ ನನ್ನ ಮುಂದಿದೆ. ಚುನಾವಣೆಯಿಂದ ನಾನು ಬೀದಿಗೆ ಬಂದಿದ್ದೇನೆ. ನಾನು ಸಹಾಯ ಮಾಡಿದವರೇ ನನ್ನ ವಿರುದ್ಧ ಪ್ರಚಾರ ಮಾಡಿ ನನ್ನನ್ನು ಸೋಲಿಸಿದರು ಎಂದು ಗೋಳಿಟ್ಟರು. ಇನ್ನೂ ಯಾವತ್ತೂ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೊನೆಗೆ ಕಣ್ಣೀರಿಡುತ್ತಲೆ ಮಂಡಿಯೂರಿ ತಮಗೆ ಮತ ಹಾಕಿದವರಿಗೆ ಹಾಗೂ ಹಾಕದವರಿಗೆ ನಮಸ್ಕಾರಿಸದ ಘಟನೆ ಕೂಡ ನಡೆಯಿತು.

. ಕಾಂಗ್ರೆಸ್ ನ ಮಾಜಿ ಶಾಸಕ ಎಚ್.ಪಿ ಮಂಜುನಾಥ್ ಮೂರೂವರೆ ಲಕ್ಷ ರೂಪಾಯಿ ಕೊಟ್ಟರು. ಮಾಜಿ ಶಾಸಕ ವೆಂಕಟೇಶ್ 2 ಲಕ್ಷ ಕೊಟ್ಟರು. ಇಷ್ಟು ಬಿಟ್ಟರೆ ಇನ್ಯಾರು ನನ್ನ ಸಹಾಯಕ್ಕೆ ಬರಲಿಲ್ಲ ಎಂದು ದುಃಖದಿಂದ ಹೇಳಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions