‘ಕುಟುಂಬ ರಾಜಕಾರಣದ ವಿರುದ್ಧ ಸರ್ಜಿಕಲ್‌ ಸ್ಟ್ರೈಕ್‌ ನಡೆಸಬೇಕು’ : ಸಿ.ಟಿ ರವಿ


Wednesday, April 17th, 2019 8:05 pm

ದಾವಣಗೆರೆ:  ಕಾಂಗ್ರೆಸ್‌ನ ಕುಟುಂಬ ರಾಜಕಾರಣ ವಿರುದ್ಧ ಬಿಜೆಪಿ ಕಾರ್ಯಕರ್ತರು ಸರ್ಜಿಕಲ್‌ ಸ್ಟ್ರೈಕ್‌ ನಡೆಸಬೇಕೆಂದು ಶಾಸಕ  ಸಿಟಿ ರವಿ ಹೇಳಿದರು.

ಜಿಲ್ಲಾ ಬಿಜೆಪಿಯಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇತೂರು ರಸ್ತೆಯಲ್ಲಿ ಬುಧವಾರ ಅಭ್ಯರ್ಥಿ ಜಿ.ಎಂ. ಸಿದ್ದೇಶ್ವರ್‌ ಪರ ರೋಡ್‌ ಶೋ ಮೂಲಕ ಪ್ರಚಾರ ನಡೆಸಿ ಕಾಂಗ್ರೆಸ್‌ನ ಕುಟುಂಬ ರಾಜಕಾರಣ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್ ಪಕ್ಷದ ಮನೆ, ಬೂತ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ಸರ್ಜಿಕಲ್‌ ಸ್ಟ್ರೈಕ್‌ ಕೈಗೊಳ್ಳಬೇಕು. ದೇಶದಲ್ಲಿ 70 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ನೆಹರು ಕಾಲದಿಂದ  ನೆಹರು ಕಾಲದಿಂದ ಕುಟುಂಬ ರಾಜಕಾರಣ ನಡೆಸುತ್ತಿದೆ. ಆದರೆ, ಬಿಜೆಪಿಯಲ್ಲಿ ಹಾಗೆ ಇಲ್ಲ. ಸಾಮಾನ್ಯ ಟೀ ಮಾರುತ್ತಿದ್ದ ಹುಡುಗ ದೇಶದ ಪ್ರಧಾನಿಯಾಗಿದ್ದಾರೆ. ಮೋದಿ ದೇಶವೇ ಒಂದು ಕುಟುಂಬ ಎಂದು ಹೇಳಿದ್ದು, ಎಲ್ಲರ ಶ್ರೇಯೋಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ ಎಂದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions