ಬಿಗ್ ಬ್ರೇಕಿಂಗ್ : ಕಾಂಗ್ರೆಸ್ ಪಕ್ಷದ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ!?


Sunday, July 22nd, 2018 5:08 pm


ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್​ನ ನೂತನ ಕಾರ್ಯಕಾರಿ ಸಮಿತಿಯು ಇಂದು ನವದೆಹಲಿಯಲ್ಲಿ ಮೊದಲ ಸಭೆ ನಡೆದು ಮುಕ್ತಾಯವಾಗಿದೆ.

ಇದೇ ವೇಳೆ ರಾಹುಲ್ ಗಾಂಧಿಯವರನ್ನು ತಮ್ಮ ಪಕ್ಷದ ಪ್ರಧಾನಿ ಮಂತ್ರಿ ಅಭ್ಯರ್ಥಿಯನ್ನಾಗಿ ಬಿಂಬಿಸುವುದರ ಜೊತೆಗೆ, ಲೋಕಸಭಾ ಚುನಾವಣೆಯನ್ನು ರಾಹುಲ್ ಗಾಂಧಿನೇತೃತ್ವದಲ್ಲಿ ಎದುರಿಸಲು ಮುಂದಾಗಿದೆ ಎನ್ನಲಾಗಿದೆ.

ಇದೇ ವೇಳೆ ಸಭೆಯಲ್ಲಿ ಎಲ್ಲಾ ಪಕ್ಷಗಳು ಪ್ರಜಾಪ್ರಭುತ್ವ ಉಳಿವಿಗಾಗಿ  ನೀಡಿ ಮತ್ತು ತಮ್ಮ ತಮ್ಮ ವೈಯುಕ್ತ ಆಶಯಗಳನ್ನು ಬದಿಗಿಡಬೇಕು ಅಂತ ಹೇಳಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಮುಂದಿನ ರಾಜಸ್ಥಾನ ಮಧ್ಯ ಪ್ರದೇಶ ರಾಜ್ಯ ಚುನಾವಣೆಗಳಲ್ಲಿ ಮನೆ ಮನೆಗಳಿಗೆ ತಲುಪಿ ಪ್ರಚಾರ ನಡೆಸಬೇಕು ಅಂತ ಚರ್ಚೆ ನಡೆದಿದ್ದು, ಅಗತ್ಯವಿರುವ ಕಡೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಸ್ಥಳೀಯ ಪಕ್ಷಗಳ ಜೊತೆ ಮೈತ್ರಿಕೊಂಡರೆ ಉತ್ತಮ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions