ಧರ್ಮಸ್ಥಳದಲ್ಲಿ ನೀರಿಗೆ ಬರ ಹಿನ್ನೆಲೆ : ಕ್ಷೇತ್ರದ ದರ್ಶನ ಮುಂದೂಡುವಂತೆ ಪ್ರವಾಸಿಗರಿಗೆ ಡಾ. ವೀರೇಂದ್ರ ಹೆಗ್ಗಡೆ ಮನವಿ


Saturday, May 18th, 2019 10:47 am

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಈಗ ನೀರಿನ ಬಿಸಿ ಧರ್ಮಸ್ಥಳಕ್ಕೂ ತಟ್ಟಿದೆಈ ಹಿನ್ನೆಲೆಯಲ್ಲಿ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡುವಂತೆ ಧರ್ಮಸ್ಥಳ ಧರ್ಮಾಧಿಕಾರಿ ಡಾ ವಿರೇಂದ್ರ ಹೆಗ್ಗಡೆ ಕೋರಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಬರ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ, ಇಡೀ ರಾಜ್ಯದಲ್ಲಿ ಬರದ ಲಕ್ಷಣವಿದ್ದು, ನೀರಿನ ಕೊರತೆಯಿದೆ. ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಕೊರತೆಯಿದೆ. ನಮಗೆ ಮೇಲಿನ ಘಟ್ಟ ಭಾಗದಿಂದ ನೀರು ಹರಿದು ಬರಬೇಕು. ಆದರೆ ಅಲ್ಲಿ ಮಳೆಯಾಗದೇ ಇರೋ ಕಾರಣ ನಮಗೆ ನೀರಿಲ್ಲ. ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡಿಕೊಂಡಿದ್ದಾರೆ.

ಕಿಂಡಿ ಆಣೆಕಟ್ಟು ಕಟ್ಟಿದ ಕಾರಣ ತೀರ್ಥ ಮತ್ತು ಅಭಿಷೇಕಕ್ಕೆ ನೀರಿದೆ. ಅಲ್ಲಿ ತೀರ್ಥ ಗುಂಡಿಯಲ್ಲೂ ನಾಲ್ಕು ಗುಂಡಿ ಕಡಿಮೆ ಆಗಿದೆ. ಈ ಹಿಂದೆಯೂ ಈ ರೀತಿ ಆಗಿದೆ. ಇಷ್ಟು ತೀವ್ರವಾಗಿ ಆಗಿಲ್ಲ. ಹಾಗಾಗಿ ನೀರಿನ ಬಳಕೆ ಕಡಿಮೆ ಮಾಡಿ ಜನರು ನೀರು ಉಳಿಸಬೇಕು. ನೇತ್ರಾವತಿ ನದಿಯ ಪೂರಕ ನದಿಯ ನೀರು ಇಂಗುತ್ತಿದೆ. ಉಪನದಿಗಳ ನೀರು ಇಂಗುತ್ತಿರುವ ಪರಿಣಾಮ ನೀರಿಗೆ ಸಮಸ್ಯೆ ಆಗಿದೆ. ಸರ್ಕಾರ ಮತ್ತು ಜಲತಜ್ಞರು ಈ ಬಗ್ಗೆ ಯೋಚನೆ ಮಾಡಬೇಕು. ಮುಂದಿನ 15-20 ವರ್ಷಗಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು ಎಂದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions