ಮಾಜಿ ಪ್ರಧಾನಿ ದೇವೇಗೌಡರ ಆರೋಪದಲ್ಲಿ ಯಾವುದೇ ಹುರುಳಿಲ್ಲ : ಈಶ್ವರ್ ಖಂಡ್ರೆ


Monday, January 14th, 2019 8:12 pm

ಹಾವೇರಿ : ಕಾಂಗ್ರೆಸ್ ಕಂಡಿಶನ್ ಗಳ ಮೇಲೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದು, ಈ ಆರೋಪದಲ್ಲಿ ಯಾವುದೇ ಹುರುಳಿಲ್ಲವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಇಂದು ಹಾವೇರಿ ತಾಲೂಕು ನರಶೀಪುರದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ‘ ಕಾಂಗ್ರೆಸ್ ಕಂಡಿಶನ್ ಗಳ ಮೇಲೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದು, ಈ ಆರೋಪದಲ್ಲಿ ಯಾವುದೇ ಹುರುಳಿಲ್ಲವೆಂದು ಹೇಳಿದ್ದಾರೆ.

ಶಾಸಕ ಉಮೇಶ್ ಜಾದವ್ ಬಿಜೆಪಿ ಸೇರ್ಪಡೆ ಕುರಿತು ಮಾತನಾಡಿದ ಖಂಡ್ರೆ ‘ ಉಮೇಶ್ ಜಾದವ್ ಸ್ನೇಹಿತ. ಆತ ಕಾಂಗ್ರೆಸ್ ಬಿಟ್ಟೂ ಎಲ್ಲೂ ಹೋಗುವುದಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಶಾಸಕರು ನಮ್ಮೊಂದಿಗೆ ಇದ್ದಾರೆ, ಆದರೆ ಸುಮ್ಮನೆ ಬೇರೆ ಕಡೆ ಹೋಗುತ್ತಾರೆ ಎಂದು ವದಂತಿ ಹಬ್ಬಿಸಲಾಗಿದೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿರಲಿದೆ. ಸರ್ಕಾರಕ್ಕೆ ಏನು ಆಗೋಲ್ಲ ಎಂದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions