ಸಮ್ಮಿಶ್ರ ಸರ್ಕಾರದ ಮೊದಲ ಸಮನ್ವಯ ಸಮಿತಿಯಲ್ಲಿ ನಡೆದ ಚರ್ಚೆ ಬಗ್ಗೆ ಇಲ್ಲಿದೆ ಮಾಹಿತಿ


Thursday, June 14th, 2018 6:52 pm

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಮೊದಲ ಬಾರಿಗೆ ಕುಮಾರ ಕೃಪ ಅತಿಥಿ ಗೃಹದಲ್ಲಿ ಸಮನ್ವಯ ಸಮಿತಿಯ ಮೊದಲ ಸಭೆ ನಡೆಯಿತು ಸಭೆ ಮುಕ್ತಾಯವಾದ ನಂತರ ಮಾಧ್ಯಮಗಳ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು.

ಇದೇ ವೇಳೆ ಅವರು ಮಾತನಾಡಿ ಸಮಿತಿಯಲ್ಲಿ ಕಾಂಗ್ರೆಸ್ ಪಕ್ಷದ ಮೂವರು, ಜೆಡಿಎಸ್ ಪಕ್ಷದ ಇಬ್ಬರು ಸದಸ್ಯರು ಇರಲಿದ್ದಾರೆ. ಈ ಸಮಿತಿ ನೀಡುವ ವರದಿಯನ್ನು ಸಮನ್ವಯ ಸಮಿತಿ ಮುಂದಿಟ್ಟು ಅನುಮೋದನೆ ಪಡೆಯಲಾಗುತ್ತದೆ ಅಂತ ಹೇಳಿದರು. ಇನ್ನು ಎರಡೂ ಪ್ರಣಾಳಿಕೆ ಬೇರೆ ಬೇರೆಯಾಗಿರುವ ಕಾರಣಕ್ಕಾಗಿ ಇಬ್ಬರು ಉಲ್ಲೇಖ ಮಾಡಿರುವ ವಿಷಯಗಳನ್ನು ಜಾರಿ ಮಾಡುವುದು ಕಷ್ಟದ ಕೆಲಸ. ಆದ್ದರಿಂದ ಎರಡೂ ಪ್ರಣಾಳಿಕೆಗಳಲ್ಲಿನ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ಪಟ್ಟಿ ಮಾಡಿ ಜಾರಿ ಮಾಡಲಾಗುವುದು, ಹೀಗಾಗಿ ಪ್ರಣಾಳಿಕೆಗೆ ಸಂಬಂಧಪಟ್ಟಂತೆ  ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳನ್ನು ಪಟ್ಟಿ ಮಾಡಲು ಸಮಿತಿ ರಚಿಸಲಾಗುವುದು. ಸಮಿತಿಯು ಇನ್ನು ಹತ್ತು ದಿನದಲ್ಲಿ ವರದಿ ನೀಡಲಿದೆ ಎಂದು ತಿಳಿಸಿದರು.

ಇನ್ನು ಇದೇ ವೇಳೆ ಅವರು ಮಾತನಾಡಿ ನಿಗಮ ಮಂಡಳಿ ನೇಮಕದ ನಿಗಮ ಮತ್ತು ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸಿಎಂ ಮತ್ತು ಡಿಸಿಎಂ ನಿರ್ಧಾರವೇ ಅಂತಿಮ. ಮೊದಲ ಹಂತದಲ್ಲಿ 30 ನಿಗಮ ಮಂಡಳಿ ಅಧ್ಯಕ್ಷ ಉಪಾಧ್ಯಕ್ಷರ ನೇಮಕ ಮಾಡುವ ನಿರ್ಧಾರಕ್ಕೆ  ಸಭೆಯಲ್ಲಿ  ಬರಲಾಯಿತು ಎಂದರು.

ಇನ್ನು ಸುಮಾರು ಒಂದು ಗಂಟೆ ಮೂವತ್ತು ನಿಮಿಷ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್​, ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ ವೇಣುಗೋಪಾಲ್​, ಜೆಡಿಎಸ್​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್​ ಅಲಿ ಭಾಗವಹಿಸಿದ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions