ಸುಭಾಷಿತ :

Monday, September 23 , 2019 3:51 PM

‘ದೋಸ್ತಿ ಸರಕಾರ’ದಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ : ‘ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬೋಧನೆ’ಗೆ ಮಾಜಿ ಸಿಎಂ ಸಿದ್ದು ಆಕ್ರೊಶ


Wednesday, May 22nd, 2019 6:01 pm

ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬೋಧನೆಗೆ ನನ್ನ ವಿರೋಧವಿದೆ. ನಾನು ಕನ್ನಡ ಭಾಷೆ, ನೆಲ, ಜಲದ ವಿಚಾರದಲ್ಲಿ ರಾಜಿ ಆಗುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಮೈಸೂರಿನಲ್ಲಿರುವ ನೃಪತುಂಗ ಕಲಾ-ವಾಣಿಜ್ಯ ಪದವಿ ಪೂರ್ವ ಕಾಲೇಜು ಕಟ್ಟಡ ಉದ್ಘಾಟಿಸಿ ಮಾತನಾಡಿದರು. 

ಇದೇ ವೇಳೆ ಅವರು  ನಾವು ಕಾಮನ್ ಮಿನಿಮಮ್ ಪ್ರೋಗ್ರಾಂ ಮಾಡಿಕೊಂಡಿದ್ದೇವೆ. ಅದರಲ್ಲಿ ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಬೋಧನೆಯ ವಿಚಾರವಿಲ್ಲ. ಆದ್ದರಿಂದ ಸಿಎಂ ಕುಮಾರಸ್ವಾಮಿ ಅವರ ಜೊತೆಗೆ ನಾನು ಮಾತನಾಡುತ್ತೇನೆ ಎಂದು ಮೈತ್ರಿ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದರು.
ಇದೇ ವೇಳೆ ಅವರು

ಇದೇ ವೇಳೆ ಅವರು ಮಾತನಾಡುತ್ತ ಶಿಕ್ಷಣದ ಗುಣಮಟ್ಟ ಕಡಿಮೆಯಾಗಿದ್ದರಿಂದ ಕನ್ನಡ ಶಾಲೆಗಳು ಮುಚ್ಚುತ್ತಿವೆ. ಸಾಮಾಜಿಕ, ಶೈಕ್ಷಣಿಕ ವ್ಯವಸ್ಥೆ ಸುಧಾರಣೆ ಆಗಬೇಕಾದರೆ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು. ನಮ್ಮ ದೇಶದಲ್ಲಿ ಜಾತಿ ವ್ಯವಸ್ಥೆ ಹೆಚ್ಚಾಗುತ್ತಲೇ ಇದೆ. ಜಾತಿ ಜಾತಿಗಳ ನಡುವೆ ಸಮಾನತೆ ಬಾರದೇ ಹೋದರೆ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ. ಕೆಳ ಜಾತಿಗಳಿಗೆ ಸಾಮಾಜಿಕ, ಶೈಕ್ಷಣಿಕ ಸಮಾನತೆ ಸಿಕ್ಕರೆ ಜಾತಿ ವ್ಯವಸ್ಥೆ ಕ್ರಮೇಣವಾಗಿ ಕಡಿಮೆಯಾಗುಗುತ್ತದೆ ಎಂದು ಅಭಿಪ್ರಾಯ ತಿಳಿಸಿದರು .

ಕೇವಲ ಭಾಷಣಗಳಿಂದ ಜಾತಿ ವ್ಯವಸ್ಥೆಯ ನಿರ್ಮೂಲನೆ ಅಸಾಧ್ಯ. ಅದನ್ನು ಸಮಾಜದಿಂದ ಬುಡಸಮೇತ ಕಿತ್ತು ಹಾಕಬೇಕಾದರೆ ಅದಕ್ಕೆ ಅಗತ್ಯವಾದ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಬೇಕು. ಇಂತಹ ಪ್ರಯತ್ನಗಳಲ್ಲಿ ಏಕರೂಪದ ಶಿಕ್ಷಣವೂ ಒಂದು. ಭಾಷಾ ಅಸಮಾನತೆ ಇರುವವರೆಗೆ ಸಾಮಾಜಿಕ ಬದಲಾವಣೆ ತರಲು ಸಾಧ್ಯವಿಲ್ಲ. ಎಲ್ಲಾ ರಾಜ್ಯಗಳಲ್ಲಿ ಮಾತೃಭಾಷೆ ಶಿಕ್ಷಣ ಸಿಗುವುದರ ಜೊತೆಗೆ ದೇಶಾದ್ಯಂತ ಏಕರೂಪದ ಶಿಕ್ಷಣ ಪದ್ಧತಿ ಜಾರಿಯಾಗಬೇಕಿತ್ತು. ಆದರೆ ಶಿಕ್ಷಣದ ಭಾಷೆಯ ಆಯ್ಕೆ ಪೋಷಕರು ಹಕ್ಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಈ ನೀತಿಯ ಜಾರಿಗೆ ತೊಡಕಾಗಿದೆ. ಕೇಂದ್ರ ಸರ್ಕಾರ ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಕಡ್ಡಾಯ ಎಂದು ನಿಯಮ ರೂಪಿಸಿ, ಜಾರಿಗೊಳಿಸಿದರೆ ಈ ಬದಲಾವಣೆ ಸಾಧ್ಯವಿದೆ.

ಕನ್ನಡದ ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಸರ್ಕಾರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದಕ್ಕೆ ನನ್ನ ಸಹಮತವಿಲ್ಲ. ಈ ಬಗ್ಗೆ ಮತ್ತೊಮ್ಮೆ ಮುಖ್ಯಮಂತ್ರಿಗಳ ಬಳಿ ಚರ್ಚಿಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಉಳಿಯಬೇಕು ಎಂದಾದರೆ ಇಲ್ಲಿ ಎಲ್ಲರಿಗೂ ಕನ್ನಡ ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತಾಗಬೇಕು ಅಂತ ಹೇಳಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions