ನಕಲಿ ನೋಟು ಚಲಾವಣೆ : ನಾಲ್ವರಿಗೆ ಜೀವಾವಧಿ ಶಿಕ್ಷೆ


Friday, October 12th, 2018 1:28 pm

ಪಾಟ್ನಾ : ನಕಲಿ ನೋಟು ಚಲಾವಣೆ ಹಾಗೂ ಕಳ್ಳಸಾಗಣೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪಾಟ್ನಾದಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ನಕಲಿ ನೋಟು ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿರುವುದು ವಿಶೇಷವಾಗಿದೆ. ನಕಲಿ ನೋಟು ಚಲಾವಣೆ ಹಾಗೂ ಕಳ್ಳಸಾಗಣೆಯಿಂದ ದೇಶದ ಆರ್ಥಿಕ ವ್ಯವಸ್ಥೆಗೆ ಧಕ್ಕೆಯಾಗುತ್ತದೆ ಎಂದು ನ್ಯಾಯಾಲಯ ಹೇಳಿದ್ದು, ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಆಫ್ರೋಜ್, ಸನ್ನಿ, ಇಶ್ರಾಫುಲ್ ಆಲಂ ಹಾಗೂ ಅಲೋಮ್‌ಗಿರ್ ಶೇಖ್ ಎಂಬವರು ಭಯೋತ್ಪಾದಕ ಕೃತ್ಯ ಎಸಗಿದ್ದಾರೆ ಎಂದು ಪರಿಗಣಿಸಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions