ಸರಕಾರಕ್ಕೆ 15 ದಿನ ಗಡುವು ನೀಡಿ ಪ್ರತಿಭಟನೆ ಹಿಂಪಡೆದ ರೈತರು


Monday, November 19th, 2018 5:15 pm


ಬೆಂಗಳೂರು: ಸಕ್ಕರೆ ಕಾರ್ಖಾನೆಗಳಿಗೆ ಪೂರೈಸಿದ ಕಬ್ಬಿನ ಹಣ ಬಾಕಿ ಪಾವತಿಗೆ ಕ್ರಮ ಕೈಗೊಳ್ಳಬೇಕು ಹಾಗೂ ಕೂಡಲೇ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ನಗರದ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದರು. ಆದರೆ, ಪೊಲೀಸರು ರೈತರನ್ನು ಸ್ವಾತಂತ್ರ್ಯ ಉದ್ಯಾನವನದ ಬಳಿಯೇ ತಡೆ ಹಿಡಿದಿದ್ದರು.

ಇದೇ ವೇಳೆ ಬೇಡಿಕೆಗಳಿಗೆ ಸ್ಪಂದಿಸಿರುವುದಾಗಿ ರಾಜ್ಯ ಸರಕಾರಕ್ಕೆ ಭರವಸೆ ನೀಡಿರುವ ಸರಕಾರಕ್ಕೆ ರೈತರು ಹದಿನೈದು ದಿನಗಳ ಗಡುವು ನೀಡಿದ್ದಾರೆ. ಒಂದು ವೇಳೆ ಭರವಸೆ ಈಡೇರದಿದ್ದರೆ, ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions