ದೇವೇಗೌಡ್ರು ಯಾವಾಗ ವಿಷ ಕುಡಿಯುತ್ತಾರೆ : ಪರಮೇಶ್ವರ್ ಹಳೆ ವಿಡಿಯೋ ರಿಲೀಸ್ ಮಾಡಿದ ಬಿಜೆಪಿ!


Thursday, February 14th, 2019 1:40 pm

ಬೆಂಗಳೂರು : ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆದ ಬೆನ್ನಲ್ಲೇ ಬಿಜೆಪಿ ಇದೀಗ ಹಳೆಯ ವಿಡಿಯೋವೊಂದನ್ನು ಬಿಡುಗಡೆ ಮಾಡುವ ಮೂಲಕ ದೋಸ್ತಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

2014 ರಲ್ಲಿ ಜಿ.ಪರಮೇಶ್ವರ್ ಅವರು ಮಾಜಿ ಪ್ರಧಾನಿ ದೇವೇಗೌಡರು ಪ್ರತಿ ಚುನಾವಣೆಗೂ ಮುನ್ನ ಕಣ್ಣೀರು ಹಾಕುತ್ತಾರೆ. ನೀವು ಒಂದು ವೇಳೆ ಜೆಡಿಎಸ್ ನ್ನು ಗೆಲ್ಲಿಸದಿದ್ದರೆ ವಿಷ ಕುಡಿಯುತ್ತೇನೆ ಎಂದು ಹೇಳುತ್ತಾರೆ. ಹೀಗಾಗಿ ದೇವೇಗೌಡರು ಯಾವಾಗ ವಿಷ ಕುಡಿಯುತ್ತಾರೆ ಎಂದು ಕಾಯುತ್ತಿದ್ದೇನೆ ಎಂದು ಪರಮೇಶ್ವರ್ ಹಿಂದೆ ಹೇಳಿದ್ದ ವಿಡಿಯೋ ವನ್ನು ಬಿಜೆಪಿ ತನ್ನ ಖಾತೆಯಿಂದ ಹರಿಬಿಟ್ಟಿದೆ.

ಈ ವಿಡಿಯೋವನ್ನು ಟ್ವೀಟ್ ಮಾಡಿರುವ ಬಿಜೆಪಿ, ದೇವೇಗೌಡರು ವಿಷ ಸೇವಿಸುವುದನ್ನು ಕಾಯುತ್ತಿರುವ ಡಿಸಿಎಂ ಪರಮೇಶ್ವರ್ ಅವರ ಮನೆಯ ಮೇಲೂ ಕಲ್ಲು ತೂರುತ್ತಾರಾ ಜೆಡಿಎಸ್ ಸ್ವಾಭಿಮಾನಿ ಕಾರ್ಯಕರ್ತರು? ಎಂದು ಪ್ರಶ್ನಿಸಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions