ಬಿಗ್ ಬ್ರೇಕಿಂಗ್ : ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ಇನ್ನಿಲ್ಲ


Sunday, March 17th, 2019 8:15 pm

ಪಣಜಿ : ಮಾಜಿ ರಕ್ಷಣಾ ಮಂತ್ರಿ ಹಾಗೂ ಹಾಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಕಳೆದ ಹಲವು ದಿನಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ ಅವರು, ಗೋವಾ, ಮುಂಬೈ, ದೆಹಲಿ ಹಾಗೂ ನ್ಯೂಯಾರ್ ನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇಂತಹ ಗೋವಾ ಮುಖ್ಯಮಂತ್ರಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ.

ಆರ್ ಎಸ್ ಎಸ್ ಇನ್ನಲೆಯಲ್ಲಿ ಬಂದ ಮನೋಹರ್ ಪರಿಕರ್, ಗೋವಾದಿಂದ ಬಿಜೆಪಿಗೆ ಆಯ್ಕೆಯಾದ ಮೊದಲ ವ್ಯಕ್ತಿ ಎನಿಸಿದ್ದರು. ಇಂತಹ ಗೋವಾ ಮುಖ್ಯಮಂತ್ರಿ ಕಳೆದ ಫೆಬ್ರವರಿ 2018ರಿಂದ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಈ ಸನ್ನಿವೇಶದಲ್ಲೂ ದೃತಿಗೆಡದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್, ನನ್ನ ಕೊನೆಯ ಉಸಿರು ಇರುವವರೆಗೆ, ಗೋವಾವನ್ನು ಉತ್ತಮ ರೀತಿಯಲ್ಲಿ ಆಡಳಿತ ನಡೆಸುವುದಾಗಿ ಹೇಳುತ್ತಿದ್ದರು.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ, ಮೂಗಿಗೆ ಟ್ಯೂಬ್ ಧರಿಸಿಯೇ ತಮ್ಮ ಆರೋಗ್ಯದ ಬಗ್ಗೆ ಸ್ವತ ಪತ್ರಿಕಾ ಘೋಷ್ಠಿ ನಡೆಸಿ ಮಾತನಾಡಿದ್ದ ಮನೋಹರ್ ಪರಿಕರ್, ಕೆಲವೇ ದಿನಗಳಲ್ಲಿ ಗುಣಮುಖರಾಗಿ ಹೊರಬರುವ ಅಭಿಪ್ರಾಯ ವ್ಯಕ್ತ ಪಡಿಸಿದ್ದರು.

ಆದರೇ ಇಂತಹ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್, ಇಂದು ಚಿಕಿತ್ಸೆ ಫಲಕಾರಿಯಾಗದೇ ನಮ್ಮನ್ನು ಅಗಲಿದ್ದಾರೆ. ಈ ಮೂಲಕ ಬಾರದ ಲೋಕಕ್ಕೆ ತೆರಳಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions