ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ’ಸಿಹಿ ಸುದ್ದಿ’ : 10,611 ಪದವೀಧರ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ


Thursday, March 7th, 2019 5:34 am

ಬೆಂಗಳೂರು : ರಾಜ್ಯಾದ್ಯಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 10,611 ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳ ನೇರ ನೇಮಕಾತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ಮಾ. 11 ರ ಸೋಮವಾರದಿಂದ ಕೇಂದ್ರೀಕೃತ ದಾಖಲಾತಿ ಘಟಕದ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏ. 10 ಕಡೆಯ ದಿನಾಂಕವಾಗಿದೆ. ಸ್ಮರ್ಧಾತ್ಮಕ ಪರೀಕ್ಷೆ ಮೂಲಕ ಅರ್ಹ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಹೈದರಾಬಾದ್-ಕರ್ನಾಟಕ ಪ್ರದೇಶದ ಜಿಲ್ಲೆಗಳ ಶೇ. 80 ರ ಸ್ಥಳೀಯ ವೃಂದದ ಮತ್ತು ಬೆಂಗಳೂರು ಬಿಬಿಎಂಪಿ ಪ್ರದೇಶ ವ್ಯಾಪ್ತಿಯ ಶಾಲೆಗಳ ಶೇ. 8 ರ ಹಾಗೂ ರಾಜ್ಯ ಮಟ್ಟದ ಸ್ಥಳೀಯ ವೃಂದದ ಹುದ್ದೆಗಳಿಗೆ ಮೇ. 18 ಮತ್ತು 19 ರಂದು ಮೊದಲ ಹಂತದ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

ಮೇ. 25 ಮತ್ತು 26 ರಂದು ಹೈ-ಕ ಜಿಲ್ಲೆಗಳ ಶೇ. 20 ರಷ್ಟು ಮತ್ತು ಬೆಂಗಳೂರು ಬಿಬಿಎಂಪಿ ಪ್ರದೇಶ ವ್ಯಾಪ್ತಿಯ ಶಾಲೆಗಳ 92 ರಷ್ಟು ಹಾಗೂ ಇತರೆ ಜಿಲ್ಲೆಗಳ ಶೇ. 100 ರಷ್ಟು ಹುದ್ದೆಗಳಿಗೆ 2 ನೇ ಹಂತದ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ www.Schooleducation. Kar.nic.in ಗೆ ಭೇಟಿ ನೀಡಬಹುದು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions