ಸುಭಾಷಿತ :

Monday, September 23 , 2019 3:58 PM

ಪತ್ರಕರ್ತರಿಗೆ ಗುಡ್ ನ್ಯೂಸ್ : ಪತ್ರಕರ್ತರು ಮತ್ತು ಅವರ ಕುಟಂಬಕ್ಕೆ ಆರೋಗ್ಯ ವಿಮೆ ಜಾರಿಗೆ ಸರ್ಕಾರದಿಂದ ಸುತ್ತೋಲೆ


Wednesday, May 22nd, 2019 5:13 pm

ಬೆಂಗಳೂರು : ರಾಜ್ಯದಲ್ಲಿ ವಿವಿಧ ವಲಯದಲ್ಲಿ, ವಿವಿಧ ಪತ್ರಿಕೆ, ದೃಶ್ಯ ಮಾಧ್ಯಮ ಸೇರಿದಂತೆ ವಿವಿಧೆಡೆ ಕೆಲಸ ಮಾಡುತ್ತಿರುವ ನೊಂದಾಯಿತ ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರದಿಂದ ಸುತ್ತೋಲೆ ಹೊರಡಿಸಿದೆ.

ರಾಜ್ಯದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರು, ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಕೆಲಸ ಮಾಡುವ ಪತ್ರಕರ್ತರು ಮತ್ತು ಅವಲಂಬಿತರಿಗೆ, ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ ಅಡಿ.ಲ್ಲಿ ನಿರ್ಧಿಷ್ಟ ಪಡಿಸಿದ ವೈದ್ಯಕೀಯ ಸೌಲಭ್ಯ ಲಭ್ಯವಾಗಲಿದೆ.

2018-19ನೇ ಸಾಲಿನ ಅಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯದಲ್ಲಿ ಮಾನ್ಯತೆ ಪಡೆದು, ಪೂರ್ಣ ಪ್ರಮಾಣದಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಅವರ ಅವಲಂಬಿತ ಕುಟುಂಬದವರಿಗೆ( ಪತಿ, ಪತ್ರಿ, ಇಬ್ಬರು ಮಕ್ಕಳು, ಅವಿವಾಹಿತರಾಗಿದ್ದಲ್ಲಿ ತಂದೆ-ತಾಯಿ ಸೇರಿ) ವೈದ್ಯಕೀಯ ಸೇವೆಯನ್ನು ಉಚಿತವಾಗಿ ಪಡೆಯ ಬಹುದಾಗಿದೆ.

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ವೈದ್ಯಕೀಯ ಸೌಲಭ್ಯ ಪಡೆಯಲು ಅರ್ಹತೆಗಳು

  • ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾನ್ಯತೆ ಪಡೆದ ಪತ್ರಕರ್ತರ ಪಟ್ಟಿಯಲ್ಲಿರುವ ಎಲ್ಲಾ ಪತ್ರಕರ್ತರು ಮತ್ತು ಅವರ ಕುಟುಂಬದವರು ಯೋಜನೆಗೆ ಅರ್ಹರಾಗಿರುತ್ತಾರೆ.
  • ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಅಂದರೇ ದಿನ ಪತ್ರಿಕೆ, ವಾರ ಪತ್ರಿಕೆ, ಪಾಕ್ಷಿಕ, ಮಾಸಿಕ, ದ್ವೈಮಾಸಿಕ ಪತ್ರಿಕಯ ಖಾಯಂ ಉದ್ಯೋಗಿಗಳು ಮತ್ತು ಅವರ ಕುಟುಂಬದವರು ಪಡೆಯ ಬಹುದು.
  • ಸರ್ಕಾರಿ, ಸರ್ಕಾರಿ ಸ್ವಾಮ್ಯದ ಅಥವಾ ಉದ್ಯೋಗಸ್ಥ ಪತ್ನಿಗೆ ಈ ಸೌಲಭ್ಯ ದೊರೆಯವುದಿಲ್ಲ.
  • ಈ ಯೋಜನೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಪತ್ರಕರ್ತರಿಗೆ ಲಭ್ಯವಿರುತ್ತದೆ.
  • ಈ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿದ ಫಲಾನುಭವಿಗಳು ನಿರ್ಧಿಷ್ಟ ಪಡಿಸಿದ 1 ಸಾವಿರದ 614 ಚಿಕಿತ್ಸೆಗಳನ್ನು ಉಚಿತವಾಗಿ ಹಾಗೂ ಎಪಿಎಲ್ ಕಾರ್ಡ್ ಹೊಂದಿದ ಫಲಾನುಭವಿಗಳು 1 ಸಾವಿರದ 614 ಚಿಕಿತ್ಸೆಗಳಿಗೆ ಸರ್ಕಾರಿ ಮತ್ತು ಖಾಸಗಿ ನೊಂದಾಯಿತ ಆಸ್ಪತ್ರೆಗಳಲ್ಲಿ ಉಚಿತವಾಗಿ ಪಡೆಯಬಹುದು.
  • ಆಯುಷ್ಮಾನ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಿಂದ ಶೇ.30% ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಶೇ.70% ಚಿಕಿತ್ಸಾ ವೆಚ್ಚವನ್ನು ಭರಿಸುತ್ತದೆ.
  • ಈ ಯೋಜನೆಗಾಗಿ ಪತ್ರಕರ್ತರು ಹಾಗೂ ಅವರ ಅವಲಂಬಿತರು ನೊಂದಾವಣೆಯ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮಾಧ್ಯಮ ಸಂಸ್ಥೆಯ ನೇಮಕಾತಿ ಪತ್ರ ಹಾಗೂ ಕಾರ್ಯನಿರತ ಪತ್ರಕರ್ತರ ಗುರುತಿನ ಚೀಟಿ ಅಥವಾ ಜಿಲ್ಲಾ ಮಟ್ಟದ ಸಮಿತಿ ನೀಡುವ ಪತ್ರ ಸಲ್ಲಿಸಿ, ಯೋಜನೆಗೆ ನೊಂದಾಯಿಸಿಕೊಳ್ಳಬಹುದಾಗಿದೆ.
  • ಪತ್ರಕರ್ತರ ಕುಟುಂಬ ವರ್ಗದವರು ಕಡ್ಡಾಯವಾಗಿ ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಜರುಪಡಿಸಬೇಕು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions