ಸುಭಾಷಿತ :

Monday, November 18 , 2019 6:09 PM

ಹೆಚ್.ಡಿ.ಕುಮಾರಸ್ವಾಮಿಗೆ ಬುದ್ದಿ ಹೇಳುವಷ್ಟು ದೊಡ್ಡವ್ರು ನಾವಲ್ಲ :ಕೈ ಶಾಸಕ ಅಮರೇಗೌಡ


Saturday, September 14th, 2019 10:39 am

ಕೊಪ್ಪಳ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬುದ್ದಿ ಹೇಳುವಷ್ಟು ನಾವು ದೊಡ್ಡವರಲ್ಲ ಎಂದು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ಆಗಮನದಿಂದ ಇಸ್ರೋ ಪ್ರಯತ್ನ ವಿಫಲವಾಯಿತು ಎಂಬ ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಅವರು ಹಾಗೇ ಹೇಳಿಕೆ ನೀಡಿದ್ದು ತಪ್ಪು, ಅವರಿಗೆ ಬುದ್ದಿ ಹೇಳುವಷ್ಟು ದೊಡ್ಡವರು ನಾವಲ್ಲ. ಇಸ್ರೋ ಪ್ರಯತ್ನ ಶ್ಲಾಘನಿಯ. ಕೊನೆ ಕ್ಷಣದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ವಿಫಲ ಕಂಡಿದೆ ಅಷ್ಟೇ ಎಂದು ತಿಳಿಸಿದರು.

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಬಂಧನವು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಆಗಿದೆ. ವಿರೋಧ ಪಕ್ಷಗಳ ನಾಯಕರನ್ನು ಮಾತ್ರ ಬಂಧಿಸಲಾಗುತ್ತಿದೆ. ಕಾನೂನು ಚೌಕಟ್ಟು ಮೀರಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪ್ರಮುಖ ಪಾತ್ರ ವಹಿಸಿದೆ ಎಂದು ಆರೋಪಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions