ಪ್ರತ್ಯೇಕ ರಾಜ್ಯ ಬೇಕೆಂದಿದ್ದ ಶ್ರೀ ರಾಮುಲುಗೆ ಸಿಎಂ ಕುಮಾರಸ್ವಾಮಿ ಹೇಳಿದ್ದೇನು..?
Thursday, July 12th, 2018 8:15 pm
ವಿಧಾನಸಭೆ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿಸಬೇಕೆಂಬ ಬಿಜೆಪಿ ಶಾಸಕ ಶ್ರೀರಾಮುಲು ಅವರ ಹೇಳಿಕೆಗೆ ಸದನದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
”ರಾಜ್ಯವನ್ನು ಪ್ರತ್ಯೇಕಿಸುವುದು ನಮ್ಮ ಸರ್ಕಾರದ ಗುರಿಯಲ್ಲ. ಬದಲಿಗೆ, ಸಮಗ್ರ ಕರ್ನಾಟಕದ ಅಭಿವೃದ್ಧಿ ನಮ್ಮ ಗುರಿ,” ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಎರಡು ದಿನಗಳ ಹಿಂದೆ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಶಾಸಕ ಶ್ರೀರಾಮುಲು ಅವರು ಉತ್ತರ ಕರ್ನಾಟಕಕ್ಕೆ ಈ ಬಜೆಟ್ನಲ್ಲಿ ಆಗಿರುವ ಅನ್ಯಾಯದಿಂದ ಬೇಸತ್ತು ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಬೆಂಬಲ ನೀಡಲು ತೀರ್ಮಾನಿಸಿದ್ದೇವೆ ಎಂದು ಹೇಳಿಕೆ ನೀಡಿದ್ದರು.ಇಂದು ಹೆಚ್ಡಿಕೆ ಅವರು ಬಿಜೆಪಿ ಶಾಸಕ ಶ್ರೀರಾಮುಲು ಅವರ ಪ್ರತ್ಯೇಕ ರಾಜ್ಯದ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು.