‘ಟೀಕೆಗಳಿಗೆ ತಲೆಕೆಡಿಸಿಕೊಳ್ಳೋಲ್ಲ, ‘ಬಿಜೆಪಿ’ ಸರ್ಟಿಫಿಕೇಟ್ ಬೇಕಿಲ್ಲ’ : ಸಿಎಂ ಕುಮಾರಸ್ವಾಮಿ


Thursday, June 20th, 2019 9:25 pm

ಬೆಂಗಳೂರು :  ರಾಜ್ಯದ ಜನರ ಸಮಸ್ಯೆಗೆ ಪರಿಹಾರ ಒದಗಿಸಲು ಗ್ರಾಮ ವಾಸ್ತವ್ಯ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ನಾಳೆ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯ ಯಾದಗಿರಿ ಜಿಲ್ಲೆಯ ಗುರುಮಿಠ್ಕಲ್ ತಾಲ್ಲೂಕಿನ ಚಂಡರಕಿ ಗ್ರಾಮದಿಂದ ಆರಂಭವಾಗಲಿದೆ. ಈ ಹಿನ್ನೆಲೆ ಯಾದಗಿರಿ ಜಿಲ್ಲೆಯ ಗುರುಮಿಠ್ಕಲ್ ಗೆ ತೆರಳಲು ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದರು.

ಟೀಕೆಗಳ ಬಗ್ಗೆ ತಲೆ ಕೆಡಿಸ್ಕೊಳ್ಳಲ್ಲ, ನನಗೆ ಗ್ರಾಮ ವಾಸ್ತವ್ಯ ಕೂಡ ಒಂದು ಸವಾಲು ಆಗಿದೆ. ಜನರ ಸಮಸ್ಯೆಗೆ ಪರಿಹಾರ ಒದಗಿಸಲು ಗ್ರಾಮ ವಾಸ್ತವ್ಯ ಮಾಡುತ್ತಿದ್ದೇನೆ ಎಂದರು.  ಬಿಜೆಪಿಯವರ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ, ಹಾಗೂ ಅವರ ಸರ್ಟಿಫಿಕೇಟ್ ನನಗೆ ಬೇಕಿಲ್ಲ. ಕಳೆದ ಬಾರಿ ಗ್ರಾಮದ ಮನೆಯಲ್ಲಿ ಉಳಿದುಕೊಂಡಿದ್ದೆ, ಆದರೆ ಈ ಬಾರಿ ಸರ್ಕಾರಿ ಶಾಲೆಯಲ್ಲಿ ಉಳಿದುಕೊಳ್ಳಲಿದ್ದೇನೆ ಎಂದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions