ವಿಮಲಾಬಾಯಿ ದೇಶಮುಖ್ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ


Sunday, July 22nd, 2018 6:48 pm

ವಿಜಯಪುರ: ಮಾಜಿ ಸಚಿವೆ, ವಿಮಲಾಬಾಯಿ ದೇಶಮುಖ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ವಿಮಲಾಬಾಯಿ ದೇಶಮುಖ್ ಅವರ ನಾಯಕತ್ವದ ಗುಣ ಹಾಗೂ ಮಹಿಳಾ ಏಳಿಗೆಯ ಕಾಳಜಿ ಎಲ್ಲರಿಗೂ ಮಾರ್ಗದರ್ಶಿಯಾಗಿರಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಅವರ ಕುಟಂಬಕ್ಕೆ ಅಗಲಿಕೆಯನ್ನು ಸಹಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.

ಮಾಜಿ ಸಚಿವೆ, ವಿಮಲಾಬಾಯಿ ದೇಶಮುಖ(70) ವಿಜಯಪುರದ ತಮ್ಮ ನಿವಾಸದಲ್ಲಿ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions