ವೈದ್ಯಾಧಿಕಾರಿಯಿಂದ ಕಿರುಕುಳ ಆರೋಪ : ಡೆತ್ ನೋಟು ಬರೆದಿಟ್ಟು ಆರೋಗ್ಯ ಸಹಾಯಕ ಆತ್ಮಹತ್ಯೆ ಯತ್ನ


Friday, October 12th, 2018 5:41 pm

ಉಡುಪಿ: ಜಿಲ್ಲೆಯ ಬ್ರಹ್ಮಾವರದಲ್ಲಿರುವ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ವಿರುದ್ಧ ಕಿರುಕುಳ ಆರೋಪ ಮಾಡಿ, ಕಿರಿಯ ಆರೋಗ್ಯ ಸಹಾಯಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಕಿರಿಯ ಆರೋಗ್ಯ ಸಹಾಯಕನಾದ ನಾಗರಾಜ್ ಎಂಇ (25) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮೂಲತ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮೂಡಲ ವಿಠಲಾಪುರದ ನಾಗರಾಜ್, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳ ಹಿಂದೆ ಕಿರಿಯ ಆರೋಗ್ಯ ಸಹಾಯಕನಾಗಿ ನೇಮಕವಾಗಿದ್ದ. ಕರ್ತವ್ಯದ ವಿಚಾರವಾಗಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಜಿಲ್ಲಾಧಿಕಾರಿ ಪ್ರಿಯಾಂಕಾ ಅವರಿಗೆ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಹಿರಿಯ ವೈದ್ಯಾಧಿಕಾರಿ ಮಹೇಶ್ ಐತಾಳ್ ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರದಲ್ಲಿ ಬರೆದಿದ್ದಾನೆ. ಈ ಬಗ್ಗೆ ಡಿಹೆಚ್ಒಗೆ ದೂರು ನೀಡಿದ್ದರೂ ಪ್ರಯೋಜನವಾಗದೇ ಮನನೊಂದು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ. ಸದ್ಯ ಮಣಿಪಾಲ್​ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ನಾಗರಾಜ್​ಗೆ ಚಿಕಿತ್ಸೆ ನೀಡಲಾತ್ತಿದ್ದು, ಆರೋಗ್ಯ ಸುಧಾರಿಸಿದ ನಂತರವಷ್ಟೇ ನಿಜವಾದ ವಿಷಯ ಬಯಲಾಗಲಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions