ವಿವಿಎಸ್ ಲಕ್ಷ್ಮಣ್ ಹೇಳುವಂತೆ ಈ ಬಾರಿಯ ವಿಶ್ವಕಪ್ ಫೇವರಿಟ್ ತಂಡಗಳು ಯಾವು ಗೊತ್ತಾ?


Thursday, February 14th, 2019 1:57 pm

ಕೋಲ್ಕತ್ತಾ : ಇನ್ನೇನು ವಿಶ್ವಕಪ್ ಗೆ ಕ್ಷಣಗಣನೆ ಆರಂಭವಾಗಿದ್ದು, ವಿಶ್ವ ಕ್ರಿಕೆಟ್ ಪ್ರೇಮಿಗಳು ಸದ್ಯ ಇಂಗ್ಲೆಂಡ್ ನಲ್ಲಿ ನಡೆಯುವ ವಿಶ್ವಕಪ್ ನತ್ತ ಚಿತ್ತ ನೆಟ್ಟಿದ್ದಾರೆ.

ಈಗಾಗಲೇ ಹಲವರು ಈ ಬಾರಿ ವಿಶ್ವಕಪ್ ಎತ್ತಿ ಹಿಡಿಯುವ ಫೇವರಿಟ್ ತಂಡಗಳಾವುವು ಎಂಬ ಚರ್ಚೆಯೂ ಶುರುವಾಗಿದ್ದು, ಈ ಬಗ್ಗೆ ಟೀಂ ಇಂಡಿಯಾದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಸಹ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.  ಸಂದರ್ಶನವೊಂದರಲ್ಲಿ ವಿವಿಎಸ್ ಲಕ್ಷ್ಮಣ್, ಈ ಬಾರಿಯ ವಿಶ್ವಕಪ್ ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಗೆಲ್ಲುವ ನೆಚ್ಚಿನ ತಂಡಗಳು ಎಂದು ಅಭಿಪ್ರಾಯ ಹೊರಹಾಕಿದ್ದಾರೆ.

ಪ್ರಸ್ತುತ ಭಾರತ ತಂಡ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಸರಣಿಗಳನ್ನು ಗೆದ್ದು ತನ್ನ ಸಾಮಾರ್ಥ್ಯ ಏನೆಂದು ಸಾಬೀತು ಮಾಡಿದ್ದು, ಇನ್ನೊಂದೆಡೆ, ಇಂಗ್ಲೆಂಡ್ ಸಹ ಏಕದಿನ ಪಂದ್ಯಗಳಲ್ಲಿ ಅದ್ಬುತ ಪ್ರದರ್ಶನ ನೀಡುತ್ತಿದ್ದು, ಈ ಬಾರಿಯ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions