ಐಎಂಎ ವಂಚನೆ ಪ್ರಕರಣ : ಹೈಕೋರ್ಟ್ ಮೆಟ್ಟಿಲೇರಿದ ಹೂಡಿಕೆದಾರ


Friday, June 14th, 2019 9:07 pm

ಬೆಂಗಳೂರು : ಐಎಂಎ ಜ್ಯೂವೆಲರೀಸ್ ವಂಚನೆ ಪ್ರಕರಣದಲ್ಲಿ ವಂಚನೆಗೆ ಒಳಗಾಗಿರುವವ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದಂತೆ, ತನಿಖೆಯ ಉಸ್ತುವಾರಿ ವಹಿಸಿಕೊಂಡಿರುವ ಎಸ್ ಐ ಟಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಸಾವಿರಾರು ಕೋಟಿ ರೂಪಾಯಿಗಳನ್ನು ವಂಚಿಸಿರುವ ಐಎಂಎ ಕಂಪೆನಿ ವಿರುದ್ಧ ಸಿಬಿಐಯಿಂದ ತನಿಖೆ ನಡೆಸುವಂತೆ ಕೋರಿ ಚಿತ್ರದುರ್ಗ ಮೂಲದ ಹೂಡಿಕೆದಾರ ಮೊಹಮ್ಮದ್ ಸಿರಾಜುದ್ದೀನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅರ್ಜಿ ವಿಚಾರಣೆಯನ್ನು ತುರ್ತಾಗಿ ನಡೆಸುವಂತೆ ಸಿರಾಜುದ್ದೀನ್ ಪರ ವಕೀಲರು ಮೆಮೋ ಮೂಲಕ ಮನವಿ ಮಾಡಿಕೊಂಡರು. ಅದಕ್ಕೆ ಸೋಮವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಹೇಳಿದೆ. ಅಲ್ಲದೇ ಐಎಂಎ ಬಹುಕೋಟಿ ವಂಚನೆ ಪ್ರಕರಣದ ಶಾಕ್ ಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನ ಅಬ್ದುಲ್ ಪಾಷಾ ಎಂಬುವವರು ಐಎಂಎ ಕಂಪೆನಿಯ ವಂಚನೆಗೆ ಒಳಗಾಗಿದ್ದು. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions