ಕೇಂದ್ರ ಸರ್ಕಾರದಿಂದ ನೌಕರ ವರ್ಗಕ್ಕೆ ಸಿಹಿಸುದ್ದಿ : ರೂ. 5 ಲಕ್ಷದವರೆಗೂ ಕಟ್ಟಬೇಕಿಲ್ಲ ಆದಾಯ ತೆರಿಗೆ


Monday, January 14th, 2019 9:07 pm

ನವದೆಹಲಿ: ಸಂಕ್ರಾಂತಿ ಹಬ್ಬದಲ್ಲಿರುವ ನೌಕರ ವರ್ಗಕ್ಕೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ ಸಿಕ್ಕಿದೆ. ರೂ. 5 ಲಕ್ಷದವರೆಗೂ ಆದಾಯ ತೆರಿಗೆ ಕಟ್ಟಬೇಕಿಲ್ಲ ಎಂದು ಕೇಂದ್ರ ಸರ್ಕಾರ ಘೋಷಿಸುವ ಸಾಧ್ಯತೆಯಿದೆ.

ಹೌದು. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ.  ಈ   ಮೂಲಕ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಮತದಾರರನ್ನು ಸೆಳೆಯಲು ಹಣಕಾಸು ಸಚಿವ ಅರುಣ್​ ಜೇಟ್ಲಿ ಮುಂದಾಗಿದ್ದಾರೆ ಎನ್ನಲಾಗಿದೆ.

ಹೌದು.  ಲೋಕಸಭೆ ಚುನಾವಣೆ  ಹೊತ್ತಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಫೆಬ್ರವರಿ 1ರಂದು ಬಜೆಟ್​ ಮಂಡನೆ ಮಾಡಲು ಮುಂದಾಗಿದೆ. ಚುನಾವಣಾ ಪೂರ್ವ ಬಜೆಟ್​ನಲ್ಲಿ ರೂ. 5 ಲಕ್ಷದೊಳಗಿನ ಆದಾಯ ಹೊಂದಿದವರಿಗೆ ತೆರಿಗೆ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಸದ್ಯ ಆದಾಯ ತೆರಿಗೆ ವಿನಾಯಿತಿಯ ಮಿತಿ ರೂ 2.5 ಲಕ್ಷ ವಾರ್ಷಿಕ ವರಮಾನವಾಗಿತ್ತು. ಇದೀಗ ಈ ಮಿತಿಯನ್ನು ಐದು ಲಕ್ಷಕ್ಕೆ ಏರಿಕೆ ಮಾಡಲು ಕೇಂದ್ರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಈ ಮಹತ್ವದ ತೆರಿಗೆ ವಿನಾಯಿತಿ ನಿರ್ಧಾರವನ್ನು ಜಾರಿಗೆ ತರುವ ಅವಕಾಶವಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions