ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್​ಗೆ ಅನಾರೋಗ್ಯ: ವಿಕ್ರಂ ಆಸ್ಪತ್ರೆಗೆ ದಾಖಲು


Wednesday, October 17th, 2018 5:49 pm


ಬೆಂಗಳೂರು: ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡ್ನಿಸ್ಟೋನ್ನಿಂದ ಬಳಲುತ್ತಿರುವ ವಿಶ್ವನಾಥ್​ ಅವರಿಗೆ ಎರಡು ದಿನಗಳ ಹಿಂದಷ್ಟೇ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

ಸದ್ಯ ಬಿಪಿ, ಶುಗರ್, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಅವರಿಗೆ ವಿಕ್ರಂ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಆಸ್ಪತ್ರೆಗೆ ಭೇಟಿ ನೀಡಿ ವಿಶ್ವನಾಥ್​ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions