ಸುಭಾಷಿತ :

Tuesday, September 17 , 2019 7:00 AM

-->

ಕಲಬುರಗಿ ಜನತೆಗೆ ಸಿಹಿಸುದ್ದಿ : ಹೈ-ಕ ವಿಮೋಚನಾ ದಿನದಂದೇ `ಕಲಬುರ್ಗಿ ಏರ್ ಪೋರ್ಟ್’ ಗೆ ಚಾಲನೆ!?


Saturday, August 24th, 2019 10:23 am

ಕಲಬುರ್ಗಿ : ಕಲಬುರ್ಗಿ ಜಿಲ್ಲೆಯ ಜನತೆಯ ಬಹುದಿನಗಳ ಕನಸು ನನಸಾಗುವ ದಿನ ಹತ್ತಿರ ಬಂದಿದ್ದು, ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದಂದೇ ಕಲಬುರ್ಗಿ ಏರ್ ಪೋರ್ಟ್ ಗೆ ಚಾಲನೆ ನೀಡುವ ಸಾಧ್ಯತೆ ಇದೆ.

ಕಲಬುರ್ಗಿ ಏರ್ ಪೋರ್ಟ್ ವಾಣಿಜ್ಯ ಕಾರ್ಯಾಚರಣೆ ಆರಂಭಿಸುವ ವಿಚಾರವಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ಮಧ್ಯೆಯ ಒಪ್ಪಂದಕ್ಕೆ ಇಂದು ಬೆಂಗಳೂರಿನಲ್ಲಿ ಸಹಿ ಬೀಳಲಿದೆ. ಈ ಬಗ್ಗೆ ಕರ್ನಾಟಕ ಸರ್ಕಾರದ ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

ಸೆಪ್ಟೆಂಬರ್ 17 ರಂದು ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದಂದ ಜಿಲ್ಲೆಯ ಹೊರವಲಯದ ಶ್ರೀನಿವಾಸ ಸರಡಗಿ ಬಳಿಯ ಕಲಬುರ್ಗಿ ಏರ್ ಪೋರ್ಟ್ ಉದ್ಘಾಟನೆಯಾಗುವ ಸಾಧ್ಯತೆ ಇದೆ. ಈಗಾಗಲೇ ಉದ್ಘಾಟನೆಗೆ ಪ್ರಧಾನಿ ಮೋದಿ ಹಾಗೂ ವಿಮಾನಯಾನ ಸಚಿವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಆಹ್ವಾನಿಸಿದ್ದಾರೆ.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions