ನಾಳೆ ಕಲಬುರಗಿಗೆ ರಾಹುಲ್ : ‘ಸೋಲಿಲ್ಲದ ಸರದಾರ’ ಖರ್ಗೆ ಪರ ಪ್ರಚಾರ


Sunday, March 17th, 2019 8:12 pm

ಕಲಬುರ್ಗಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲ್ಲಿ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ 18 ರಂದು ಸೋಮವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಹೈದರಾಬಾದ್ಕರ್ನಾಟಕ ಭಾಗದಲ್ಲಿ ಏಪ್ರಿಲ್ 23 ರಂದು ನಡೆಯಲಿರುವ ಮೂರನೇ ಹಂತದ ಲೋಕಸಭಾ ಚುನಾವಣೆಗೆ ಪ್ರಚಾರ ಕೈಗೊಳ್ಳಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ಕಲಬುರಗಿಯಲ್ಲಿ ಚುನಾವಣಾ ರಣ ಕಹಳೆ ಊದಲಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಸಂಸದೀಯ ನಾಯಕ , ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಪರ ಪ್ರಚಾರ ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ 12: 30 ಕ್ಕೆ ರಾಹುಲ್ ಕಲಬುರಗಿಗೆ ಆಗಮಿಸಲಿದ್ದು, ಒಂದು ಗಂಟೆ ಸಮಾವೇಶದಲ್ಲಿ ಭಾಗವಹಿಸಿ ನಂತರ ಬೆಂಗಳೂರಿಗೆ ತೆರಳಲಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions