ಓಟಿಗಾಗಿ ಕೆ.ಪಿ.ಸಿ.ಸಿ ಅಧ್ಯಕ್ಷ ಪರಮೇಶ್ವರ್‌ ರಿಂದ ಗ್ರಾಮ ವಾಸ್ತವ್ಯ ಪರ್ವ!


Tuesday, January 30th, 2018 3:42 pm

ತುಮಕೂರು: ಮತ ಬೇಟೆಗಾಗಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರ ಕಸರತ್ತು ಮುಂದುವರೆದಿದೆ. ಕೊರಟಗೆರೆ ಕ್ಷೇತ್ರದ ಕೋಳಾಲ ಹೋಬಳಿಯ ಎನ್.ಬೇವಿನಹಳ್ಳಿಯಲ್ಲಿ ಪರಮೇಶ್ವರ್ ಗ್ರಾಮ ವಾಸ್ತವ್ಯ ಮಾಡಿದ್ದಾರೆ.

ಬೇವಿನಹಳ್ಳಿಯ ರೈತ ರಂಗಧಾಮಯ್ಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ಪರಮೇಶ್ವರ್ ಮುದ್ದೆ ಊಟ ಸವಿಸಿದರು. ಬಳಿಕ, ನೆಲದ ಮೇಲೆ ಚಾಪೆ ಹಾಸಿಕೊಂಡು ಮಲಗಿದರು. ಅದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಗ್ರಾಮ ವಾಸ್ತವ್ಯ ಪರಿಕಲ್ಪನೆ ಸಮಾಜಮುಖಿಯಾಗಿದೆ. ಗ್ರಾಮ ವಾಸ್ತವ್ಯದಿಂದ ಗ್ರಾಮದ ಸಮಸ್ಯೆ, ಹಳ್ಳಿ ಜನರ ಕಷ್ಟನಷ್ಟ ತಿಳಿಯುತ್ತದೆ ಎಂದರು. ಬಿಜೆಪಿ ವಿರುದ್ಧ ವಾಗ್ದಾಳಿ

ಇದೇ ವೇಳೆ ಬಿಜೆಪಿ ಓವೈಸಿ ಜೊತೆ ಸಂಪರ್ಕದ ಆರೋಪ ಪ್ರಸ್ತಾಪಿಸಿದ ಪರಮೇಶ್ವರ್‌‌, ಬಿಜೆಪಿ ಒಳಗೊಳಗೆ ಓವೈಸಿ ಜೊತೆ ಮಾತುಕತೆ ನಡೆಸುತ್ತಿರುವುದು ನಮಗೆ ಮೊದಲೇ ಗೊತ್ತಿತ್ತು. ಮುಸ್ಲಿಂರನ್ನು ದ್ವೇಷಿಸುವ ಬಿಜೆಪಿ ಓವೈಸಿ ಸಖ್ಯ ಬೆಳೆಸಿದೆ. ಅವರಿಗೆ ನೈತಿಕತೆಯೇ ಇಲ್ಲವೆಂದು ಹರಿಹಾಯ್ದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions