ಸುಭಾಷಿತ :

Monday, September 23 , 2019 3:54 PM

ಬ್ರೇಕಿಂಗ್ : ಪದವಿ ವಿದ್ಯಾರ್ಥಿಗಳಿಗೆ ‘ಭರ್ಜರಿ ಗುಡ್ ನ್ಯೂಸ್’ ,’ದೋಸ್ತಿ’ ಸರ್ಕಾರದಿಂದ ಉಚಿತ ಲ್ಯಾಪ್ ಟಾಪ್ ವಿತರಣೆ


Friday, June 14th, 2019 8:23 pm

ಬೆಂಗಳೂರು :  ಸಚಿವ ಸಂಪುಟ ಸಭೆಯ ನಂತರ ಗ್ರಾಮೀಣಾಬಿವೃದ್ಧಿ ಸಚಿವರಾದ ಶ್ರೀ ಕೃಷ್ಣಭೈರೇಗೌಡ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ಧಿಗೋಷ್ಠಿ ನಡೆಸಿದರು.

ಈ ವೇಳೆ ಮಾತನಾಡಿದ ಅವರು ‘ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಲ್ಯಾಪ್ ಟಾಪ್ ಕೊಡುವ ಬಗ್ಗೆ ಈ ಹಿಂದೆ ಘೋಷಣೆಯಾಗಿತ್ತು. ಆದರೆ ನಾನಾ ಕಾರಣಗಳಿಂದ ಈ ಯೋಜನೆ ವಿಳಂಬವಾಗಿತ್ತು, ಆದರೆ ಇಂದು ಸಚಿವ ಸಂಪುಟ ಸಭೆ ಇದಕ್ಕೆ ಒಪ್ಪಿಗೆ ನೀಡಿದೆ. ಸುಮಾರು 311 ಕೋಟಿ ವೆಚ್ಚದಲ್ಲಿ 1 ಲಕ್ಷ 9 ಸಾವಿರ 916 ಮಕ್ಕಳಿಗೆ ಸರ್ಕಾರದ ವತಿಯಿಂದಲೇ ಮಕ್ಕಳಿಗೆ ಲ್ಯಾಪ್ ಟಾಪ್ ನೀಡುವ ವಿಚಾರಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಈಗಾಗಲೇ ಟೆಂಡರ್ ಕೂಡ ಕರೆಯಲಾಗಿದೆ ಎಂದರು.

ಇದೇ ವೇಳೆ ಮಾತನಾಡಿದ ಅವರು ಮುಖ್ಯಮಂತ್ರಿ ಸುಮಾಗ್ರಾ ಯೋಜನೆಯನ್ನು ಕೂಡ ಸದ್ಯದಲ್ಲೇ ಜಾರಿಗೆ ತರಲಿದ್ದೇವೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ಕುಣಿಗಲ್ ಪೈಪ್ ಲೈನ್ ಯೋಜನೆಯ ಕಾಮಗಾರಿಗೆ ಕೂಡ ಚಾಲನೆ ನೀಡಲಿದ್ದೇವೆ ಎಂದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions