ಸುಭಾಷಿತ :

Thursday, January 23 , 2020 5:57 PM

`KPL ‘ಇತಿಹಾಸದಲ್ಲೇ ಅತಿ ವೇಗದ ಶತಕ ಸಿಡಿಸಿದ ಕೆ. ಗೌತಮ್!


Saturday, August 24th, 2019 9:09 am

ಬೆಂಗಳೂರು : ಕರ್ನಾಟಕ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಬಳ್ಳಾರಿ ಟಸ್ಕರ್ಸ್ ತಂಡದ ಕೃಷ್ಣಪ್ಪ ಗೌತಮ್ ಅತಿ ವೇಗದ ಶತಕ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶಿವಮೊಗ್ಗ ಲಯನ್ಸ್ ವಿರುದ್ಧ ನಡೆದ ಮಳೆ ಭಾಧಿತ ಪಂದ್ಯದಲ್ಲಿ ಗೌತಮ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಪಂದ್ಯದ ನಡುವೆ ಮಳೆ ಅಡ್ಡಿಯಾಗಿದ್ದರಿಂದ ವಿಜೆಡಿ ನಿಯಮದನ್ವಯ ಪಂದ್ಯವನ್ನು 17 ಓವರ್ ಗೆ ಇಳಿಸಲಾಗಿತ್ತು.

ಮೊದಲು ಬ್ಯಾಟಿಂಗ್ ಮಾಡಿದ ಬಳ್ಳಾರಿ ತಂಡದ ಪರ ಓಪನರ್ ಆಗಿ ಕ್ರಿಸ್ ಗಿಳಿದ ಗೌತಮ್ ಕೇವಲ 39 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದರು. ಒಟ್ಟಾರೆ 55 ಎಸೆತಗಳನ್ನು ಎದುರಿಸಿದ ಗೌತಮ್ 13 ಸಿಕ್ಸರ್, 7 ಬೌಂಡರಿಗಳ ನೆರವಿನಿಂದ 133 ರನ್ ಗಳಿಸಿ ಅಜೇಯರಾಗಿ ಉಳಿದರು. ಇದರಿಂದ ಬಳ್ಳಾರಿ ಟಸ್ಕರ್ಸ್ ತಂಡ 17 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 203 ರನ್ ಗಳ ಬೃಹತ್ ಮೊತ್ತ ಪೇರಿಸಿತು.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions