ಸುಭಾಷಿತ :

Monday, September 23 , 2019 3:50 PM

ಚಂದನವನದಲ್ಲಿ ಮೂಡಿದ ‘ಮಳೆಬಿಲ್ಲು’ : ಸೊಗಸಾಗಿದೆ ನೋಡಿ ಟ್ರೇಲರ್..!


Tuesday, June 18th, 2019 7:08 pm

ಸಿನಿಮಾ ಡೆಸ್ಕ್ :   ನಿರ್ದೇಶಕ ನಾಗರಾಜ್ ಹಿರಿಯೂರು ಅವರು ಸ್ಯಾಂಡಲ್ ವುಡ್ ನಲ್ಲಿ ‘ಮಳೆಬಿಲ್ಲು’ ಎಂಬ ಹೊಸ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಸದ್ದಿಲ್ಲದೇ ಸಿನಿಮಾ ಕೆಲಸಗಳು ಪ್ರಾರಂಭವಾಗಿದೆ.

ಇತ್ತೀಚೆಗೆ ಮಳೆಬಿಲ್ಲು ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನೆರವೇರಿತು. ಶರತ್ ನಾಯಕ, ಸಂಜನಾ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ಗಣೇಶ್ ನಾರಾಯಣ್ ಸಂಗೀತ ಸಂಯೋಜನೆ ಮಾಡಿದ್ದಾರೆ, ನಿರ್ದೇಶಕರ ಸಹೋದರ ನಿಂಗಪ್ಪ ಈ ಸಿನಿಮಾಗೆ ಹಣ ಹೂಡಿದ್ದಾರೆ.

ಸದ್ಯ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದ್ದು.,  ಜುಲೈನಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಮಾಡಲಾಗಿದೆಯಂತೆ. ಶರತ್ ಎಂಬುವವರು ಈ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಕ್ಯೂಟ್ ಲವ್ ಸ್ಟೋರಿ ಜೊತೆಗೆ ಸಣ್ಣದೊಂದು ಟ್ವಿಸ್ಟ್ ನೀಡಿದ್ದಾರಂತೆ. ಒಟ್ಟಿನಲ್ಲ ಇದೊಂದು ಮ್ಯೂಸಿಕಲ್ ಲವ್ ಸ್ಟೋರಿಯಾಗಿದ್ದು, ಚಿತ್ರದಲ್ಲಿ ಒಟ್ಟು 10 ಹಾಡುಗಳಿದೆಯಂತೆ. ಸದ್ಯ ರಿಲೀಸ್ ಆಗಿರುವ ಟ್ರೇಲರ್ ಸಿನಿಪ್ರಿಯರ ಗಮನ ಸೆಳೆದಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions