ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ನೈತಿಕತೆಯಿಲ್ಲ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ


Thursday, July 12th, 2018 5:36 pm

ಕಲಬುರಗಿ: ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಸರ್ಕಾರ ರಚನೆ ಮಾಡಲು ಮುಂದಾಗಿರುವ ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅವರು ಇಂದು ಕಲಬುರಗಿಯಲ್ಲಿ 20 ಜನ ವಿಕಲಚೇತನರಿಗೆ ಸರ್ಕಾರದಿಂದ ವಾಹನ ವಿತರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಇದೇ ವೇಳೆ ಅವರು

ಈ ಹಿಂದೆ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಮಾಡಿಕೊಂಡರೂ ಉತ್ತಮ ಆಡಳಿತ ಕೊಡಲಾಗದೆ ಮೈತ್ರಿ ಮುರಿದುಬಿದ್ದಿದೆ. ಜಮ್ಮು-ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಎರಡೂ ಪಕ್ಷಗಳು ವಿಫಲವಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ ಎಂದರು.

ಇಷ್ಟಾದ ನಂತರವೂ ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುವ ಕಸರತ್ತು ಮಾಡುವ ನಾಟಕವಾಡುತ್ತಿದ್ದೆ ಅಂತ ಕಿಡಿಕಾರಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions