ಬ್ರೇಕಿಂಗ್ : ಖ್ಯಾತ ಸಿನಿಮಾ ನಿರ್ದೇಶಕ `ಮಣಿರತ್ನಂ’ ಆಸ್ಪತ್ರೆಗೆ ದಾಖಲು!


Monday, June 17th, 2019 11:00 am

ಚೆನ್ನೈ : ಖ್ಯಾತ ಸಿನಿಮಾ ನಿರ್ದೇಶಕ ಮಣಿ ರತ್ನಂ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮುಂಬೈನಲ್ಲಿ ಚಿತ್ರೀಕರಣದಲ್ಲಿದ್ದ ಮಣಿರತ್ನಂ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇದೀಗ ಅವರನ್ನು ಚೆನ್ನೈಗೆ ಕರೆತಂದಿದ್ದು, ಚೆನ್ನೈನ ಅಪೋಲೋ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕನ್ನಡ, ಹಿಂದಿ,ತಮಿಳು ಭಾಷೆಗಳಲ್ಲಿ ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ಮಣಿರತ್ನಂ ಇದೀಗ ಹೊಸ ಸಿನಿಮಾದಲ್ಲಿ ಬ್ಯುಸಿಯಾಗಿದ್ದ ವೇಳೆ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions