ಪಾರಂಪರಿಕ ಸೈಕಲ್​ ಸವಾರಿ ಮೂಲಕ ಹೆರಿಟೇಜ್​ ಬಿಲ್ಡಿಂಗ್​ ವೀಕ್ಷಣೆ ಮಾಡಿದ ಸಚಿವರು


Friday, October 12th, 2018 4:27 pm


ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಪಾರಂಪರಿಕ ಸೈಕಲ್ ಸವಾರಿಯನ್ನು ಶುಕ್ರವಾರ ಏರ್ಪಡಿಸಲಾಗಿತ್ತು.

ಪುರಾತತ್ವ ಸಂಗ್ರಹಾಲಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಜನಸಾಮಾನ್ಯರಿಗೆ ಹಾಗೂ ಪ್ರವಾಸಿಗರಿಗೆ ಪಾರಂಪರಿಕ ಕಟ್ಟಡಗಳ ಪರಿಚಯ ಮಾಡಿಕೊಡುವ ಉದ್ದೇಶದಿಂದ ವಿವಿಧ ವಯೋಮಾನದ ಮಹಿಳೆಯರಿಗೆ ಹಾಗೂ ಪುರುಷರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿಟಿ ದೇವೇಗೌಡ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಟ್ರಿನ್ ಟ್ರಿನ್ ಸೈಕಲ್ ಸವಾರಿ ಮಾಡುವ ಮೂಲಕ ಚಾಲನೆ ನೀಡಿದರು.

ಮಾಧ್ಯಮಗೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ , ಸ್ಥಳೀಯರಿಗೆ ಹಾಗೂ ಪ್ರವಾಸಿಗರಿಗೆ ಪಾರಂಪರಿಕ ಕಟ್ಟಡಗಳ ಪರಿಚಯ ಮಾಡಿಕೊಡುವ ಉದ್ದೇಶದಿಂದ ವಿವಿಧ ವಯೋಮಾನದ ಮಹಿಳೆಯರಿಗೆ ಹಾಗೂ ಪುರುಷರಿಗಾಗಿ ಈ ಸವಾರಿ ಆಯೋಜಿಸಲಾಗಿದೆ ಎಂದರು.

ಪುರಭವನದಿಂದ ಆರಂಭವಾದ ಸೈಕಲ್ ಸವಾರಿ ಚಾಮರಾಜ ಒಡೆಯರ್ ವೃತ್ತ, ಅಂಬಾವಿಲಾಸ ಅರಮನೆ, ನಾಲ್ಕನೇ ಕೃಷ್ಣರಾಜ ಒಡೆಯರ್ ವೃತ್ತ, ಲ್ಯಾನ್ಸ್ ಡೌನ್ ಬಿಲ್ಡಿಂಗ್, ಜಗನ್ ಮೋಹನ ಅರಮನೆ, ರೈಲ್ವೆ ನಿಲ್ದಾಣದ ಮೂಲಕ ಹಾದು ಮೈಸೂರು ಮೆಡಿಕಲ್ ಕಾಲೇಜು ಹತ್ತಿರ ಮುಕ್ತಾಯಗೊಂಡಿತು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions